ಎರಡು ಕಂಟೇನರ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

kannada t-shirts

ಹಾಸನ,ಫೆ,25(www.justkannada.in): ಎರಡು ಕಂಟೇನರ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಸಿಂಗಾಪುರ ಬಳಿ ಈ ಘಟನೆ ನಡೆದಿದೆ. ಒಂದೇ ಕಂಟೇನರ್ ನಲ್ಲಿದ್ದ ದಿಲೀಪ್ ಮತ್ತು ಚಂದ್ರು  ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಂದು ಕಂಟೇನರ್ ನಲ್ಲಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನ ಆಸ್ಪತ್ರೆಗೆ ರವಾನಿಸಲಾಗಿದೆ.

ಅಪಘಾತದಿಂದಾಗಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಈ ಕುರಿತು ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Key words: Hassan- collision –between–containers-Two -deaths

 

website developers in mysore