ಹಾಸನ ನಗರಸಭೆ ಜೆಡಿಎಸ್ ಸದಸ್ಯನ ಕೊಲೆ ಪ್ರಕರಣ: ಪತ್ನಿಯಿಂದ ದೂರು ದಾಖಲು..

Promotion

ಹಾಸನ,ಜೂನ್,2,2022(www.justkannada.in): ಹಾಸನ ನಗರಸಭೆ ಜೆಡಿಎಸ್ ಸದಸ್ಯ ಪ್ರಶಾಂತ್ ಕೊಲೆ ಪ್ರಕರಣ ಸಂಬಂಧ ಪ್ರಶಾಂತ್ ಪತ್ನಿ ಸೌಮ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ನಗರದ ನಿವಾಸಿ ಪೂರ್ಣ ಚಂದ್ರ  ಎಂಬುವವನ ವಿರುದ್ದ ಮೃತ ಪ್ರಶಾಂತ್ ಪತ್ನಿ ಸೌಮ್ಯ ಪನ್ಷನ್ ಮೊಹಲ್ಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.  ಪೂರ್ಣ ಚಂದ್ರ ಮತ್ತು ಸ್ನೇಹಿತರು ಕೊಲೆ ಮಾಡಿದ್ದಾರೆ ಕೆಎ 46 6388 ನಂಬರ್ ಆಟೋದಲ್ಲಿ ಬಂದು ಕೊಲೆಗೈದಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ನಿನ್ನೆ ನಗರಸಭೆ ಜೆಡಿಎಸ್ ಸದಸ್ಯ ಪ್ರಶಾಂತ್ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಪ್ರಶಾಂತ್ ರನ್ನು ಹಿಂಬಾಲಿಸಿ ಕೊಲೆ ಮಾಡಲಾಗಿದೆ. ಹಾಸನ ನಗರದ ಲಕ್ಷ್ಮೀಪುರ ಬಡಾವಣೆಯಲ್ಲಿ ಹತ್ಯೆ ನಡೆದಿದೆ. ಹಾಸನ ನಗರದ 16ನೇ ವಾರ್ಡ್ ನಿಂದ ಜೆಡಿಎಸ್ ಅಭ್ಯರ್ಥಿಯಾಗಿ ಪ್ರಶಾಂತ್ ಆಯ್ಕೆಯಾಗಿದ್ದರು. ಸಂಜೆ ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ಅಟ್ಯಾಕ್ ಮಾಡಿ ಹತ್ಯೆ ಮಾಡಲಾಗಿತ್ತು.

Key words: Hassan –municipal-member-murder-case-Complaint