ಹಾಸನಾಂಬೆ ಸಾರ್ವಜನಿಕ ದರ್ಶನಕ್ಕೆ ಇಂದು ತೆರೆ…

Promotion

ಹಾಸನ,ಅ,28,2019(www.juskannada.in): ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆದು ದರ್ಶನ ನೀಡುವ ಹಾಸನದ ಹಾಸನಾಂಬೆ ದೇವಿ ಸಾರ್ವಜನಿಕ ದರ್ಶನಕ್ಕೆ ಇಂದು ತೆರೆ ಬೀಳಲಿದೆ.

ಹಾಸನಾಂಬೆ ದರ್ಶನಕ್ಕೆ ಇಂದು ಕೊನೆಯ ದಿನವಾದ ಹಿನ್ನೆಲೆ ದೇವಿಯ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.  ಅಕ್ಟೋಬರ್ 17 ರಂದು ಹಾಸನಾಂಬ ದೇಗುಲದ ಬಾಗಿಲು ತೆರೆದು ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಹಾಸನಾಂಬೆ ದರ್ಶನಕ್ಕಾಗಿ ರಾಜ್ಯವಲ್ಲದೇ ದೇಶದ ನಾನಾ ಭಾಗಗಳಿಂದ ಭಕ್ತರು ಆಗಮಿಸಿ ದೇವಿಯ ಆಶೀರ್ವಾದ ಪಡೆದಿದ್ದಾರೆ.

ಈ ನಡುವೆ ನಾಳೆ 12.30ಕ್ಕೆ ಹಾಸನಾಂಬೆ ದೇಗುಲ ಮುಚ್ಚಲಿದ್ದು, ಕೊನೆಯ ದಿನವಾದ ಇಂದು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಈ ಬಾರಿ 13 ದಿನಗಳ ಕಾಲ ದೇಗುಲದ ಬಾಗಿಲು ತೆರೆಯಲಾಗಿದೆ.  ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿದ್ದದಾರೆ.

Key words: Hassanambe temple-close- Devotees-today.