ಇಂಥ ನೀಚ ರಾಜಕಾರಣ ನಾನು ನೋಡಿಲ್ಲ : ಸರಕಾರದ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ

ಬೆಂಗಳೂರು,ಅಕ್ಟೋಬರ್,15,2020(www.justkannada.in) : ಇಂಥ ನೀಚ ರಾಜಕಾರಣ ನಾನು ನೋಡಿಲ್ಲ. ನಮ್ಮ ಕಾರ್ಯಕರ್ತರನ್ನು ಹೆದರಿಸಲಾಗುತ್ತಿದೆ. ನಮ್ಮ ಅಭ್ಯರ್ಥಿಯ ಮೇಲೆ ಕೇಸ್ ಹಾಕಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಸಮಾಧಾನವ್ಯಕ್ತಪಡಿಸಿದ್ದಾರೆ.jk-logo-justkannada-logoಸದಾಶಿವನಗರದಲ್ಲಿರುವ ನಿವಾಸದಲ್ಲಿ ಗುರುವಾರ ಬೆಳಿಗ್ಗೆ ತುರ್ತು ಸುದ್ದಿಗೋಷ್ಠಿ ನಡೆಸಿದ ಡಿ.ಕೆ.ಶಿವಕುಮಾರ್  ಆರ್.ಆರ್. ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿರುವುದಕ್ಕೆ ಕಿಡಿಕಾರಿದ್ದಾರೆ.

ಬಿಬಿಎಂಪಿ, ಪೊಲೀಸ್ ಅಧಿಕಾರಿಗಳ ಬಳಸಿಕೊಂಡು ನಮ್ಮ ಕಾರ್ಯಕರ್ತರನ್ನು ಹೆದರಿಸಲಾಗುತ್ತಿದೆ. ಇಂತಹ ಬೆದರಿಕೆಗಳಿಗೆ ನಾವು ಹೆದರುವುದಿಲ್ಲ. ಬಿಜೆಪಿ ಸರ್ಕಾರದ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು. ನಮ್ಮ ಅಭ್ಯರ್ಥಿ ನೀತಿಸಂಹಿತೆ ಉಲ್ಲಂಘನೆ ಮಾಡದಿದ್ದರೂ ಕೇಸು ದಾಖಲಿಸಲಾಗಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

have-never-seen-such-obnoxious-politics-Dikeshi-bargains-against-government

ನೀತಿ ಸಂಹಿತೆ ಉಲ್ಲಂಘನೆಯಾಗದಿದ್ದರೂ ಕುಸುಮಾ ಅವರ ವಿರುದ್ಧ ಕೇಸು ದಾಖಲಿಸಿದ್ದು ಇದಕ್ಕೆ ಸಿಎಂ ಅವರೇ ಉತ್ತರಿಸಬೇಕು. ಕುಸುಮಾ ವಿರುದ್ಧ ಎಫ್‌ಐಆರ್‌ ದಾಖಲಿಸಿರುವುದು ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಮತ್ತು ನೀಚ ರಾಜಕಾರಣವಾಗಿದೆ ಎಂದು ಬೇಸರವ್ಯಕ್ತಪಡಿಸಿದ್ದಾರೆ.

ಸೇಡಿನ, ಹೇಡಿತನದ ರಾಜಕಾರಣ

ಅಧಿಕಾರದ ದುರ್ಬಳಕೆ. ಇದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗಿದೆ. ಚುನಾವಣೆಗೆ ಅಡ್ಡಿಪಡಿಸುವ ಯತ್ನವಿದು. ರಾಜ್ಯ ಸರ್ಕಾರದ ಈ ನಡೆ ಖಂಡನೀಯ, ನಮ್ಮ ಪಕ್ಷದ ಕಾರ್ಯಕರ್ತರಿಗೆ ಬಿಜೆಪಿ ಬೆದರಿಕೆ ಒಡ್ಡುತ್ತಿದೆ. ಸೇಡಿನ, ಹೇಡಿತನದ ರಾಜಕಾರಣವಿದು. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಕೊಡುತ್ತೇವೆ. ಇದಕ್ಕೆಲ್ಲಾ ಕಾಂಗ್ರೆಸ್ ಜಗ್ಗುವುದಿಲ್ಲ. ತಾಕತ್ತಿದ್ದರೆ ಸಿದ್ದರಾಮಯ್ಯ ವಿರುದ್ಧ ಕೇಸ್ ದಾಖಲಿಸಿ ಎಂದು ಸವಾಲು ಹಾಕಿದರು.

ಬುಧವಾರ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಯಾರೆಲ್ಲಾ 100 ಮೀಟರ್ ಒಳಗಿದ್ದರೋ ಅವರೆಲ್ಲರ ವಿರುದ್ಧ ಕೇಸ್ ದಾಖಲಿಸಬೇಕು. ಸಚಿವರು, ಶಾಸಕರೂ ಇದ್ದರು. ಒಬ್ಬೊಬ್ಬರಿಗೊಂದು ನ್ಯಾಯ, ಕಾನೂನಾ ಎಂದೂ ಆಕ್ರೋಶ ವ್ಯಕ್ತಪಡಿಸಿದರು.

ಸಮಯ ನಿಗದಿಪಡಿಸಿಕೊಂಡೇ ನಾಮಪತ್ರ ಸಲ್ಲಿಸಿದ್ದೇವೆ. ಇಂಥ ಕ್ರಮದ ಬಗ್ಗೆ ಮುಖ್ಯಮಂತ್ರಿ ಸ್ಪಷ್ಟನೆ ನೀಡಬೇಕು. ಎಫ್‌ಐಆರ್‌ ದಾಖಲಿಸಿದ ಇನ್‌ಸ್ಪೆಕ್ಟರ್‌ನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

key words : have-never-seen-such-obnoxious-politics-Dikeshi-bargains-against-government