ಕೊಟ್ಟ ಜವಾಬ್ದಾರಿ ಸಮರ್ಪಕವಾಗಿ ನಿಭಾಯಿಸುವೆ-ಕೃಷಿ ಸಚಿವ ಬಿ.ಸಿ.ಪಾಟೀಲ್

ಹಾವೇರಿ, ಮಾ 8,2020(www.justkannada.in): ಮೂರು ವರ್ಷಗಳ ಕಾಲ ಕ್ಷೇತ್ರದ ಜನರು ತಮ್ಮ ಮೇಲೆ ಹೊರಿಸಿರುವ ಜವಾಬ್ದಾರಿಯನ್ನು ಹಾಗೂ ಕರ್ತವ್ಯವನ್ನು ಸಮರ್ಪಕವಾಗಿ ನಿಭಾಯಿಸುವುದಾಗಿ ಸರ್ಕಾರದ ಕೃಷಿ ಸಚಿವ ಹಾಗೂ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.haveri-handle-responsibilities-three-years-agriculture-minister-b-c-patil

ಇಂದು ಹಿರೇಕೆರೂರು ತಾಲೂಕಿನ ಮಡ್ಲೂರು ಗ್ರಾಮದಲ್ಲಿ ಎಂ.ಜಿ.ಎನ್.ಆರ್.ಇ.ಜಿ.ಎ ಯೋಜನೆ ಅಡಿಯಲ್ಲಿ ಮಡ್ಲೂರು ಗ್ರಾಮದಲ್ಲಿ ನಿರ್ಮಾಣವಾದ ಗ್ರಾಮೀಣ ಗೋದಾಮ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ನಿರ್ಮಿಸಿರುವ ಮೂರನೇ ಅಂಗನವಾಡಿ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿ ಬಳಿಕ ಸಂತೇನಹಳ್ಳಿಯಲ್ಲಿ ನಡೆದ ಅಭಿನಂದನಾ ಸಮಾರಂಭವನ್ನುದ್ದೇಶಿಸಿ ಸಚಿವ ಬಿ.ಸಿ ಪಾಟೀಲ್ ಮಾತನಾಡಿದರು.

ಉಪಚುನಾವಣೆಯಲ್ಲಿ ತಾವು ಮತ್ತು ಉಗ್ರಾಣ ನಿಗಮದ ಅಧ್ಯಕ್ಷರು ಒಗ್ಗಟ್ಟಾಗುವ ಮೂಲಕ ಕ್ಷೇತ್ರದ ಅಭಿವೃದ್ಧಿಯ ಪಣ ತೊಟ್ಟಿದ್ದೇವೆ.ಆ ನಿಟ್ಟಿನಲ್ಲಿ ತಾವು ಕಾರ್ಯಪ್ರವೃತ್ತರಾಗಿರುವುದಾಗಿ ಅವರು ಸ್ಪಷ್ಟಪಡಿಸಿದರು. ಸರ್ವಜ್ಞನ ನಾಡಿನಲ್ಲಿ ಹೇಳಿದಂತೆ ನಡೆಯಬೇಕು.ಜಾವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು.ಅಭಿವೃದ್ಧಿಯೇ ನಮ್ಮ ಮೂಲಮಂತ್ರವಾಗಬೇಕು ಎಂದು ಸಚಿವ ಬಿ.ಸಿ ಪಾಟೀಲ್ ನುಡಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡದ ಅನುದಾನದಲ್ಲಿ ವಾಲ್ಮೀಕಿ ಭವನ, ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಹಾಗೂ ರಸ್ತೆ‌ ಅಭಿವೃದ್ಧಿಗೆ ಕ್ಷೇತ್ರದ ಜನರು ಮನವಿ ಸಲ್ಲಿಸಿದ್ದು, ಆದ್ಯತೆ ಮೇರೆಗೆ ಕೆಲಸ ನಿರ್ವಹಿಸಲಾಗುವುದು. ಪ್ರಾಧಿಕಾರಕ್ಕಿಂತ ರಸ್ತೆಗಳ ಅಭಿವೃದ್ಧಿ ಮೂಲಭೂತ ಸೌಕರ್ಯ ಕಲ್ಪಿಸುವುದು ಅತಿಮುಖ್ಯವಾಗುತ್ತದೆ‌ ಎಂದು ಸಚಿವ ಬಿಸಿ ಪಾಟೀಲ್ ತಿಳಿಸಿದರು.

 

Key words: haveri- handle-responsibilities -three years-Agriculture Minister -B.C. Patil