ಉಕ್ರೇನ್-ರಷ್ಯಾ ಯುದ್ಧ ಹಿನ್ನೆಲೆ: ಪ್ರಧಾನಿ ಮೋದಿಗೆ ಪತ್ರ ಬರೆದ ಹೆಚ್.ಡಿ ದೇವೇಗೌಡರು.

ಬೆಂಗಳೂರು,ಫೆಬ್ರವರಿ,28,2022(www.justkannada.in): ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿ 5 ದಿನಗಳು ಕಳೆದಿದ್ದು ರಷ್ಯಾ ತನ್ನ ದಾಳಿಯನ್ನ ಮುಂದುರೆಸಿದೆ. ಈ ಮಧ್ಯೆ ರಷ್ಯಾ ದಾಳಿಯಿಂದಾಗಿ ಉಕ್ರೇನ್ ಜನತೆ ತತ್ತರಿಸಿದ್ದಾರೆ.

ಇನ್ನು ವಿದ್ಯಾಭ್ಯಾಸಕ್ಕೆಂದು ತೆರಳಿರುವ ಭಾರತೀಯ ವಿದ್ಯಾರ್ಥಿಗಳು ಅಲ್ಲಿ ಸಂಕಷ್ಟಕ್ಕೆ ಸಿಲುಕಿದ್ದು ಅವರನ್ನ ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಈ ಸಂಬಂಧ ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಉಕ್ರೇನ್ ನಲ್ಲಿ ಭಾರತೀಯ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನ ತರಿತ್ವವಾಗಿ ಸ್ಥಳಾಂತರಿಸಲು ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.former-prime-minister-hd-deve-gowda-letter-prime-minister-narendra-modi-farmer

ರಷ್ಯಾ ನಡುವಿನ ಯುದ್ಧದ ಮಧ್ಯೆ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಕುರಿತು ಪ್ರಧಾನಿ ಮೋದಿ ಇಂದು ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ. ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಕೆಲವು ಕೇಂದ್ರ ಸಚಿವರು ಉಕ್ರೇನ್​ ನ ನೆರೆ ದೇಶಗಳಿಗೆ ತೆರಳಬಹುದು ಎಂಬ ಮಾಹಿತಿ ಲಭ್ಯವಾಗಿದೆ.

Key words: HD Deve Gowda -letter – PM- Modi.