ಹೆಚ್.ಡಿ ದೇವೇಗೌಡರು ಮತ್ತು ಸಿದ್ದರಾಮಯ್ಯ ಪರಸ್ಪರ ಕಾಲೆಳೆಯುವುದರಲ್ಲಿ ನಿರತ-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕೆ…

Promotion

ಬೆಂಗಳೂರು,ಜೂ,22,2019(www.justkannada.in): ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಮತ್ತು ಸಿದ್ದರಾಮಯ್ಯ  ಪರಸ್ಪರ ಕಾಲೆಳೆದುಕೊಳ್ಳುವುದರಲ್ಲಿ ನಿರತರಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ.

ಇಂದು ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜೆಡಿಎಸ್ ಕಾಂಗ್ರೆಸ್ ಎರಡು ಪಕ್ಷಗಳು ಪರಸ್ಪರ ಕಾಲೆಳೆದುಕೊಳ್ಳುವಲ್ಲಿ ಪೈಪೋಟಿ ನಡೆಸುತ್ತಿವೆ. ರಾಜ್ಯದಲ್ಲಿ ಹೆಸರಿಗೆ ಮಾತ್ರ ಸರ್ಕಾರ ಇದೆ. ರಾಜ್ಯದ ಜನರ ಸಮಸ್ಯೆಯನ್ನ ಈ ಸರ್ಕಾರ ಕಡೆಗಣಿಸಿದೆ. ಹೀಗಾಗಿ ಸರ್ಕಾರ ಬಿದ್ದು ಹೋದರೆ ಒಳ್ಳೆಯದು. ಸರ್ಕಾರ ಬಿದ್ರೆ ಬಿಜೆಪಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಮಧ್ಯಾಂತರ ಚುನಾವಣೆ ಬಗ್ಗೆ ಹೆಚ್.ಡಿ ದೇವೇಗೌಡರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ, ಸರ್ಕಾರ ಬಿದ್ದು ಹೋಗುತ್ತೆ ಎನ್ನುವ ಅರ್ಥದಲ್ಲಿ ಹೆಚ್.ಡಿ ದೇವೇಗೌಡರು ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಮತ್ತು ಹೆಚ್.ಡಿ ದೇವೇಗೌಡರು ಪರಸ್ಪರ ಕಾಲೆಳೆಯುವುದರಲ್ಲಿ ನಿರತರಾಗಿದ್ದಾರೆ ಎಂದು ಲೇವಡಿ ಮಾಡಿದರು.

key words: HD Deve Gowda- Siddaramaiah -busy -fighting -each other-Union Minister -Prahlad Joshi.