ಜೆಡಿಎಸ್ ಶಾಸಕರಿಗೆ ಪತ್ರ ಬರೆದ ಸಿದ್ಧರಾಮಯ್ಯ  ವಿರುದ್ಧ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ.

siddaramaiah-does-not-want-people-congress-former-cm-hd-kumaraswamy-tong
Promotion

ಬೆಂಗಳೂರು,ಜೂನ್,8,2022(www.justkannada.in):  ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನ ಬೆಂಬಲಿಸುವಂತೆ ಮನವಿ ಮಾಡಿ ಜೆಡಿಎಸ್ ಶಾಸಕರಿಗೆ ಪತ್ರ ಬರೆದ ವಿಪಕ್ಷ ನಾಯಕ ಸಿದ‍್ಧರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ, ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ಹಾಕುವಂತೆ JDS ಶಾಸಕರಿಗೆ ಪತ್ರ ಬರೆದ ಸಿದ್ದರಾಮಯ್ಯಗೆ ನಾಚಿಕೆ ಆಗಬೇಕು. ನಮ್ಮ ಪಕ್ಷದ ಶಾಸಕರಿಗೆ ಹೇಗೆ ಪತ್ರ ಬರೆಯುತ್ತೀರಿ. ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂದು ಟೀಕೆ ಮಾಡಿದ್ದೀರಿ. ಒಂದು ಕಾಲದಲ್ಲಿ ಸಿದ್ದರಾಮಯ್ಯ ಬಿಜೆಪಿಗೆ ಟವೆಲ್ ಹಾಕಿದ್ದರು. ಆತ್ಮಸಾಕ್ಷಿ ಇದ್ದರೆ ಸತ್ಯ ಹೇಳಿ ಎಂದು ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಕ್ರಾಸ್ ವೋಟಿಂಗ್ ಮಾಡಿಸಿದರು ಗೆಲ್ಲಲು ಸಾಧ್ಯವಿಲ್ಲ. ಬಿಜೆಪಿ ಗೆಲ್ಲಲು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.siddaramaiah-does-not-want-people-congress-former-cm-hd-kumaraswamy-tong

ನಮ್ಮ 32 ಶಾಸಕರು ನಮ್ಮ ಜೊತೆ ಇದ್ದಾರೆ. ಮುಂದಿನ ಚುನಾವಣೆ ಇರುವವರೆಗೆ ನಮ್ಮ ಶಾಸಕರು ನಮ್ಮ ಜೊತೆ ಇರುತ್ತಿನಿ ಅಂತ ಹೇಳಿದ್ದಾರೆ. ಬೇರೆ ಪಕ್ಷದವರು ನನ್ನ ಸಂಪರ್ಕದಲ್ಲಿ ಯಾರು ಇಲ್ಲ. ನನ್ನ ಆತ್ಮೀಯ ಕೆಲ ಕಾಂಗ್ರೆಸ್ ಶಾಸಕರಿಗೆ ನಮಗೆ ಎರಡು ಪ್ರಾಸ್ಥಸ್ಯದ ಮತ ನೀಡಲು ಮನವಿ ಮಾಡಿದ್ದೀನಿ. ಎರಡು ಕಡೆಯಿಂದ ಬಂದರೆ ಮಾತುಕತೆ ಮಾಡಬೇಕು. ಒಂದು ಕಡೆಯಿಂದ ಸಾಧ್ಯವಿಲ್ಲ. ಅವರು ಜೆಡಿಎಸ್ ಮುಗಿಸಬೇಕು ಅಂತ ಇದ್ದಾರೆ. ಅವರಿಗೆ ಬಿಜೆಪಿಗೆ ಗೆದ್ದರು ಪರವಾಗಿಲ್ಲ  ಎಂದು ಹೆಚ್,ಡಿಕೆ ಕುಟುಕಿದರು.

Key words: HD Kumaraswamy- against-Siddaramaiah-letter- JDS MLA