ರಾಮನಗರ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯ ತಡೆಯಲು ಹೆಚ್.ಡಿಕೆಯಿಂದ ವಾಮಮಾರ್ಗ ಖಂಡನೀಯ- ಸಚಿವ ಅಶ್ವಥ್ ನಾರಾಯಣ್.

ಬೆಂಗಳೂರು,ಅಕ್ಟೋಬರ್,1,2022(www.justkannada.in): ರಸ್ತೆ ಕಾಮಗಾರಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಹ್ವಾನಿಸದ ಹಿನ್ನೆಲೆ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಕಾರಿಗೆ ಮುತ್ತಿಗೆ ಹಾಕಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಹಿನ್ನೆಲೆ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಅಶ್ವಥ್ ನಾರಾಯಣ್, ನಮ್ಮ ರಾಮನಗರ ಜಿಲ್ಲೆಯಲ್ಲಿ ನಮ್ಮ ಬಿಜೆಪಿ ಸರ್ಕಾರ ಮಾಡುತ್ತಿರುವ ಅಭಿವೃದ್ಧಿ ಕೆಲಸಗಳನ್ನು ತಡೆಯಲು ಹೆಚ್.ಡಿ. ಕುಮಾರಸ್ವಾಮಿ ಅವರು ವಾಮ ಮಾರ್ಗ ಅನುಸರಿಸುತ್ತಿರುವುದು ಖಂಡನೀಯ ಎಂದು ಗುಡುಗಿದ್ದಾರೆ.

‘ಅಧಿಕಾರವೂ ತಪ್ಪಬಾರದು, ಅಭಿವೃದ್ಧಿಯೂ ಆಗಬಾರದು ಎಂಬ ಸಿದ್ಧಾಂತಕ್ಕೆ ಕಟ್ಟುಬೀಳುವ ಬದಲು ನಾವು ಮಾಡುತ್ತಿರುವ ಜನಪರ ಕಾರ್ಯಗಳನ್ನು ಬೆಂಬಲಿಸಿ. ಮಾನ್ಯ ಕುಮಾರಸ್ವಾಮಿ ಅವರೇ, ಅಧಿಕಾರ ಬರುತ್ತದೆ, ಹೋಗುತ್ತದೆ. ಇದ್ದಷ್ಟು ದಿನ ಎಷ್ಟು ಜನಪರ ಕೆಲಸ ಮಾಡಿದ್ದೇವೆ ಎಂಬುದಷ್ಟೇ ಶಾಶ್ವತವಾಗಿ ಉಳಿಯುತ್ತದೆ ‘ ಎಂದು ಹೆಚ್.ಡಿಕೆ ವಿರುದ್ಧ ಅಶ್ವಥ್ ನಾರಾಯಣ್ ವಾಗ್ದಾಳಿ ನಡೆಸಿದ್ದಾರೆ.

Key words: HD Kumaraswamy- development – Ramanagara – condemnable-Minister -Aswath Narayan.