ಹೆಚ್.ಡಿ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಂದ ಘೋಷಣೆ.

Promotion

ಬೆಂಗಳೂರು,ಅಕ್ಟೋಬರ್,19,2023(www.justkannada.in): ಪಕ್ಷದ ವಿರುದ್ಧ ಬಂಡಾಯವೆದ್ದಿದ್ದ ಸಿಎಂ ಇಬ್ರಾಹಿಂ ಅವರನ್ನ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟಿಸಲಾಗಿದ್ದು ನೂತನ ಜೆಡಿಎಸ್ ಅಧ್ಯಕ್ಷರಾಗಿ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಆಯ್ಕೆ ಮಾಡಲಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಘೋಷಿಸಿದರು.

ಜೆಡಿಎಸ್ ಕೋರ್ ಕಮಿಟಿ ಸಭೆ ಬಳಿಕ ಸುದ‍್ಧಿಗೋಷ್ಠಿ ನಡೆಸಿ ಮಾತನಾಡಿದ ಹೆಚ್ ಡಿ ದೇವೇಗೌಡರು, ನಾವು ಇಂದು ಸಭೆಯೊಂದನ್ನ ಕರೆದಿದ್ದೆವು. ಕೆಲವು ಪಕ್ಷದ ನಿಯಮಾವಳಿಗಳು ಕೂಡ ಇದ್ದಾವೆ. ಪಕ್ಷದ ಕೆಲವು ಘಟಕಗಳ ಜೊತೆ ಸಮಾಲೋಚನೆ ಮಾಡಿ ಒಂದು ನಿರ್ಣಯ ಮಾಡಿದ್ದೇವೆ. ಜವಾಬ್ದಾರಿ ಸ್ಥಾನವನ್ನು ಮಾರ್ಪಾಡು ಮಾಡಬೇಕಿದೆ. ಚುನಾವಣೆ ಮುಗಿದು ನಾಲ್ಕು ತಿಂಗಳಾಗಿದೆ. ಇಬ್ರಾಹಿಂ ಅವರ ಹೇಳಿಕೆಗಳನ್ನು ನಾನು ಪ್ರಸ್ತಾಪ ಮಾಡಲು ಹೋಗಲ್ಲ, ಜೆಡಿಎಸ್ ಕೋರ್ ಕಮಿಟಿ ಸದಸ್ಯರ ಸಭೆ ಕರೆದು ಚರ್ಚೆ ನಡೆಸಿದ್ದೇವೆ. ಎಲ್ಲರ ಅಭಿಪ್ರಾಯ ಪಡೆದು ಸಿ.ಎಂ.ಇಬ್ರಾಹಿಂ ಉಚ್ಚಾಟಿಸಿದ್ದೇವೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುಮಾರಸ್ವಾಮಿ ನೇಮಕ ಮಾಡಿದ್ದೇವೆ ಎಂದರು.

ನಾವು ಭಾರತೀಯ ಜನತಾ ಪಕ್ಷದ ಸರ್ಕಾರದಲ್ಲಿ ಭಾಗಿಯಾಗಿಲ್ಲ ಲೋಕಸಭಾ ಚುನಾವಣೆಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಹೆಚ್.ಡಿ ದೇವೇಗೌಡರು ಹೇಳಿದರು.

Key words: HD Kumaraswamy –JDS- State President- Announcement – former PM- HD Deve Gowda.