ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಗಳ ಜತೆ ಹೊಂದಾಣಿಕೆ ಇಲ್ಲ- ಹೆಚ್.ಡಿ ಕುಮಾರಸ್ವಾಮಿ.

ಬೆಂಗಳೂರು,ಜನವರಿ,27,2022(www.justkannada.in): ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಗಳ ಜತೆ ಹೊಂದಾಣಿಕೆ ಮಾಡಿಕೊಳ್ಳಲ್ಲ. ಯಾವುದೇ ಕಾರಣಕ್ಕೂ ರಾಷ್ಟ್ರೀಯ ಪಕ್ಷಗಳ ಜತೆ ಹೋಗಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಮಾಧ್ಯಮಗಳ ಜತೆ ಇಂದು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ,  2023ಕ್ಕೆ ನಮ್ಮ ಶಕ್ತಿ ತೋರಿಸುತ್ತೇವೆ ಎಂದಿದ್ದೆ. ಜೆಡಿಎಸ್ ಬಿಟ್ಟು  ಸರ್ಕಾರ ರಚಿಸಲು ಆಗಲ್ಲ ಎಂದಿದ್ದೆ. ಅದನ್ನ ತಪ್ಪಾಗಿ ಅರ್ಥೈಸಲಾಗಿದೆ. ಯಾವುದೇ ಕಾರಣಕ್ಕೂ ರಾಷ್ಟ್ರೀಯ ಪಕ್ಷಗಳ ಜತೆ ಹೋಗಲ್ಲ. ಯಾವುದೇ ಕಾರಣಕ್ಕೂ ರಾಷ್ಟ್ರೀಯ ಪಕ್ಷಗಳ ಮನೆ ಬಾಗಿಲಿಗೆ ಈತನಕ ಹೋಗಿಲ್ಲ, ಮುಂದೆಯೂ ಹೋಗುವುದಿಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದರು.

ಜೆಡಿಎಸ್ ಅಂತಂತ್ರ ಆದಾಗ ಸ್ವತಂತ್ರರಾಗ್ತಾರೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ನಾವೆಂದೂ ಅತಂತ್ರರಾಗಿಲ್ಲ. ಅವರಿಗೆ ಅಂತಂತ್ರವಾದಾಗ ಜೆಡಿಎಸ್ ಬಾಗಿಲು ಬಡಿದಿದ್ದಾರೆ. ಬಿಜೆಪಿ ನಾಯಕರಲ್ಲೇ ಕಡಿವಾಣ ಹಾಕುವ ಸ್ಥಿತಿ ಇಲ್ಲ. ಗೊಂದಲ ಸೃಷ್ಟಿ ಮಾಡುವುದಕ್ಕೆ ನಾವು ಅವಕಾಶ ಕೊಟ್ಟಿಲ್ಲ ಎಂದು ಹೆಚ್.ಡಿಕೆ ಟೀಕಿಸಿದರು.

ಇನ್ನು ಇಬ್ರಾಹಿಂಗೆ ವಿಪಕ್ಷ ನಾಯಕರ ಸ್ಥಾನ ನೀಡುವ ಸುದ್ದಿ ಕೇಳಿ ಬಂದಿತ್ತು  ಸಿಎಂ ಇಬ್ರಾಹಿಂ ಪಕ್ಷಕ್ಕೆ ಬಂದರೆ ಸ್ವಾಗತ ಇಂದು ನಾನು ಕರೆ ಮಾಡಿ ಮಾತನಾಡಿದ್ದೇನೆ. ಕಾಂಗ್ರೆಸ್ ಸ್ಥಾನ  ಸಿಕ್ಕಿದರೇ ಅಲ್ಲಿಯೇ ಉಪಯೋಗ ಮಾಡಿಕೊಳ್ಳಿ ಎಂದಿದ್ದೆ ಎಂದು ಹೆಚ್.ಡಿಕೆ ತಿಳಿಸಿದರು.

Key words: HD Kumaraswamy-not-alliance-election