ಮೈತ್ರಿ ಸರಕಾರಕ್ಕೆ ಕಂಟಕ ತಂದ ಸಿದ್ದರಾಮಯ್ಯ ನನ್ನ ಮೊದಲ ಶತ್ರು: ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು, ಆಗಸ್ಟ್ 25, 2019 (www.justkannada.in): ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಎಚ್.ಡಿ.ಕುಮಾರಸ್ವಾಮಿ ಹಿಗ್ಗಾಮುಗ್ಗಾ ಟೀಕಾ‌ಪ್ರಹಾರ ಮಾಡಿದ್ದಾರೆ.

ಸಿದ್ದರಾಮಯ್ಯ ನನ್ನ ಮೊದಲ ಶತೃ. ನಾನು ಸಿಎಂ ಆಗಿದ್ದು ಅವರಿಗೆ ಸಹಿಸಿಕೊಳ್ಳಲು ಅವರಿಗೆ ಸಾಧ್ಯವಾಗಲಿಲ್ಲ. ತಮ್ಮ ಆಪ್ತ ಶಾಸಕರನ್ನು ಸರ್ಕಾರದ ವಿರುದ್ದ ಎತ್ತಿಕಟ್ಟುವ ಕೆಲಸ ಮಾಡಿಕೊಂಡು ಬಂದಿದ್ದರು. ಶಾಸಕರ ರಾಜೀನಾಮೆಗೂ ಸಿದ್ದರಾಮಯ್ಯ ನೇರ ಕಾರಣ.
ಮೈತ್ರಿ ಸರ್ಕಾರ ಮುಂದುವರೆಯಬೇಕೆಂಬುದು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವಾಗಿತ್ತು. ಆದರೆ ಸಿದ್ದರಾಮಯ್ಯ ಗೆ ಅದು ಇಷ್ಟವಿರಲಿಲ್ಲ. ಸಿಎಂ ಆಗಿ ನಾನು ಕೈಗೊಂಡ ಕೆಲವು ತೀರ್ಮಾನಗಳನ್ನು ಸಹಿಸಿಕೊಳ್ಳದೆ ಸರ್ಕಾರದ ಪತನಕ್ಕೆ ನಿರಂತರ ಪ್ರಯತ್ನ ಮಾಡಿದ್ದರು ಎಂದು ದೂರಿದ್ದಾರೆ.

ಪೋನ್ ಟ್ಯಾಪಿಂಗ್ ಪ್ರಕರಣ ಸಿಬಿಐ ತನಿಖೆಗೆ ‌ವಹಿಸಿರುವುದು ಕೂಡಾ ಸಿದ್ದರಾಮಯ್ಯ ಕರಾಮತ್ತು ಕಾರಣ. ಅತೃಪ್ತ ಶಾಸಕರು ಸರ್ಕಾರ ಕ್ಕೆ ಬೆಂಬಲ ನೀಡಲು ಸಿದ್ದರಾಗಿದ್ದರೂ ಅದಕ್ಕೆ ಅವಕಾಶ ‌ನೀಡಲಿಲ್ಲ. ನಾನು ಸಿಎಂ ಕುರ್ಚಿಯಲ್ಲಿ ಕೂರುವುದನ್ನು ಸಹಿಸದ ಸಿದ್ದರಾಮಯ್ಯ ಸರ್ಕಾರ ಪತನದ ರೂವಾರಿ. ನಾನು ಕೈಗೊಂಡ ತೀರ್ಮಾನ ದ ವಿರುದ್ದ ತಮ್ಮ ಬೆಂಬಲಿಗರನ್ನು ಛೂಬಿಡುವ ಮೂಲಕ ಬಂಡಾಯಕ್ಕೆ ನಾಂದಿ ಹಾಡಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ.

ಸಿಎಂ ಆಗಿ ಅಧಿಕಾರ ವಹಿಸಿಕೊಂಡ ದಿನದಿಂದಲೂ ನನ್ನ ವಿರುದ್ದ ಕತ್ತಿ ಮಸೆಯುತ್ತಿದ್ದರು. ಶಾಸಕರನ್ನು‌ ವಿಶೇಷ ವಿಮಾನದಲ್ಲಿ ಕಳುಹಿಸುವ ಮೂಲಕ ಸರ್ಕಾರ ಪತನಕ್ಕೆ ಕಾರಣರಾದ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಮಾತಿಗೂ ಕವಡೆ ಕಾಸಿನ‌ ಕಿಮ್ಮತ್ತು ನೀಡಲಿಲ್ಲ.
ಮೈತ್ರಿ ಸರ್ಕಾರದಲ್ಲಿ ನಾನು ಸಿಎಂ ಆಗಿರಲಿಲ್ಲ. ಕ್ಲರ್ಕ್ ರೀತಿಯಲ್ಲಿ ಕೆಲಸ ಮಾಡುತ್ತಿದ್ದೆ ಎಂದು ಹೇಳಿದ್ದಾರೆ.

ನಾನು ಸಿಎಂ‌ ಆಗುವುದೇ ಸಿದ್ದರಾಮಯ್ಯ ಅವರಿಗೆ ಇಷ್ಟವಿರಲಿಲ್ಲ. ಹೀಗಾಗಿ ಹಂತಹಂತವಾಗಿ ಸರ್ಕಾರ ‌ಅಸ್ಥಿರಗೊಳಿಸುವ ಕೆಲಸವನ್ನು ‌ಸಿದ್ದರಾಮಯ್ಯ ಮಾಡುತ್ತಿದ್ದರು. ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆಂಬ ಹುನ್ನಾರ ನಡೆಸಿದ್ದರು. ಉದ್ದೇಶ ಪೂರ್ವಕವಾಗಿ ನನ್ನ ವಿರುದ್ದ ಷಡ್ಯಂತ್ರ ರೂಪಿಸಿ ಸರ್ಕಾರ ಪತನಗೊಳಿಸಿದ್ದಾರೆ. ಮುಖ್ಯಮಂತ್ರಿಯಾಗಿ ನಾನು ಕೈಗೊಂಡ ತೀರ್ಮಾನ ಅವರಿಗೆ‌ ಸಹಿಸಲು‌ ಸಾಧ್ಯವಾಗಲಿಲ್ಲ ಹೆಚ್ಡಿಕೆ ಹೇಳಿದ್ದಾರೆ.