ಆತಂಕಕ್ಕೀಡಾಗಿರುವ ಕಾರ್ಯಕರ್ತರಿಗೆ ಹುರುಪು ತುಂಬಲು ಜೆಡಿಎಸ್ ಶಾಸಕರ ಸಭೆ

Promotion

ಬೆಂಗಳೂರು, ಡಿಸೆಂಬರ್ 12, 2019 (www.justkannada.in): ಜೆಡಿಎಸ್ ಶಾಸಕರ ಸಭೆಯನ್ನು ಈ ವಾರಾಂತ್ಯದೊಳಗೆ ನಡೆಸಲು ಉದ್ದೇಶಿಸಲಾಗಿದೆ.

ವಿಧಾನಸಭೆ ಉಪಚುನಾವಣೆ ಸೋಲಿನ ಪರಾಮರ್ಶೆ  ಪಕ್ಷದ ಸಂಘಟನೆ ಮಾಡುವ ಉದ್ದೇಶದಿಂದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಗೋವಾ ಪ್ರವಾಸ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವಾಪಸ್ಸಾದ ಬಳಿಕ ಶಾಸಕರ ಸಭೆ ಕರೆಯಲು ದಿನಾಂಕ ನಿಗದಿಪಡಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗೆ ನಡೆದ ವಿಧಾನಸಭೆ ಉಪಚುನಾವಣೆಯಲ್ಲಿ ಜೆಡಿಎಸ್ ಹೀನಾಯ ಸೋಲು ಕಂಡಿದೆ. ಶಾಸಕರೂ ಸೇರಿದಂತೆ ಪಕ್ಷದ ಮುಖಂಡರಿಗೆ ಚುನಾವಣಾ ಫಲಿತಾಂಶ ಭಾರೀ ನಿರಾಸೆಯುಂಟು ಮಾಡಿದೆ. ಪಕ್ಷದ ಕಾರ್ಯಕರ್ತರು ಕೂಡ ಆತಂಕಕ್ಕೀಡಾಗಿದ್ದಾರೆ. ಹೀಗಾಗಿ ಕಾರ್ಯಕರ್ತರಿಗೆ ಹುರುಪು ತುಂಬಲು ಈ ನಿರ್ಧಾರ ಕೈಗೊಂಡಿದ್ದಾರೆ.