ಹೆಚ್.ಡಿಕೆ ರಿಲೀಸ್ ಮಾಡಿದ್ದ ವಿಡಿಯೋ ಕಟ್ ಅಂಡ್ ಪೇಸ್ಟ್ : ಸಚಿವ ಸಂಪುಟ ವಿಸ್ತರಣೆ ವಿಚಾರ ದೆಹಲಿಗೆ ಹೋಗಲ್ಲ ಎಂದ ಸಿಎಂ ಬಿ.ಎಸ್ ಯಡಿಯೂರಪ್ಪ….

Promotion

ಬೆಂಗಳೂರು,ಜ,11,2020(www.justkannada.in):  ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಹೀಗಾಗಿ ನಾನು ದೆಹಲಿಗೆ ಹೋಗಲ್ಲ. ಅವರು ರಾಜ್ಯಕ್ಕೆ ಬಂದ ವೇಳೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿ.ಎಸ್ ಯಡಿಯೂರಪ್ಪ, ಅಮಿತ್ ಶಾ ಜನವರಿ 17, 18 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಹೀಗಾಗಿ ನಾನು ದೆಹಲಿಗೆ ಹೋಗಲ್ಲ. ಅಮಿತ್ ಶಾ ರಾಜ್ಯಕ್ಕೆ ಬಂದ ವೇಳೆಯೇ  ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿ ಅವರು ಇದ್ದಾಗಲೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಮಂಗಳೂರು ಗಲಭೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಡಿಯೋ ಬಿಡುಗಡೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ  ಸಿಎಂ ಬಿಎಸ್ ಯಡಿಯೂರಪ್ಪ,  ಹೆಚ್.ಡಿ ಕೆ ಬಿಡುಗಡೆ ಮಾಡಿರುವ ವಿಡಿಯೋಕ್ಕೆ ಏನು ಅರ್ಥವಿದೆ, ಅದು ಕೇವಲ ಕಟ್‌ & ಪೇಸ್ಟ್‌ ಎಂದು ತಿಳಿಸಿದರು.

Key words: HDK released – Video -Cut and Paste-CM BS Yeddyurappa