ದೆಹಲಿಗೆ ತೆರಳಲಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್: ಕಾರಣವೇನು ಗೊತ್ತೆ..?

Promotion

ಬೆಂಗಳೂರು,ಜೂನ್,29,2021(www.justkannada.in):  ರಾಜ್ಯಕ್ಕೆ ಕೋವಿಡ್ ಲಸಿಕೆ ಬರುವುದು ವಿಳಂಬವಾಗಿರುವ ಹಿನ್ನೆಲೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ದೆಹಲಿಗೆ ತೆರಳಿ ಕೇಂದ್ರ ಸಚಿವರನ್ನ ಭೇಟಿಯಾಗಿ ಹೆಚ್ಚಿನ ಲಸಿಕೆ ಪೂರೈಸುವಂತೆ ಮನವಿ ಮಾಡಲಿದ್ದಾರೆ.jk

ಈ ಸಂಬಂಧ ಮಾಧ್ಯಮಗಳ ಜತೆ ಮಾತನಾಡಿರುವ ಸಚಿವ ಡಾ.ಕೆ.ಸುಧಾಕರ್, ಈ ತಿಂಗಳು ಹೆಚ್ಚಿನ ಕೋವಿಡ್ ಲಸಿಕೆ ಬರಬೇಕಿತ್ತು. ಆದರೆ ಕೋವಿಡ್ ಲಸಿಕೆ ಬರುವುದು ವಿಳಂಬವಾಗಿದೆ. ಹೀಗಾಗಿ ಮುಂದಿನ ಸೋಮವಾರ ಅಥವಾ ಮಂಗಳವಾರ ದೆಹಲಿಗೆ ತೆರಳಿ ಕೇಂದ್ರ ಸಚಿವರನ್ನ ಭೇಟಿಯಾಗುತ್ತೇನೆ. ಹೆಚ್ಚಿನ ಲಸಿಕೆ ಪೂರೈಸುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಎಸ್ ಎಸ್ ಎಲ್ ಸಿ ಪರೀಕ್ಷೆ ದಿನಾಂಕ ಕುರಿತು ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಸುಧಾಕರ್, ನಿನ್ನೆ ನಾನು ಬೇರೆ ಸಭೆಯಲ್ಲಿದ್ದೆ. ಹೀಗಾಗಿ ಸಂಜೆ  ಶಿಕ್ಷಣ ಸಚಿವ ಸುರೇಶ್ ಕುಮಾರ್ ಜತೆ  ಚರ್ಚಿಸಿದ್ದೇನೆ.  ಸಚಿವ ಸುರೇಶ್ ಕುಮಾರ್ ಅವರು ತಜ್ಞರು, ಸಿಎಂ ಬಳಿ ಚರ್ಚಿಸಿ ದಿನಾಂಕ ನಿಗದಿ ಮಾಡಿದ್ದಾರೆ ಎಂದು ತಿಳಿಸಿದರು.

ಇನ್ನು ಕಾಂಗ್ರೆಸ್ ನ ಆಂತರಿಕ ವಿಚಾರಗಳ ಬಗ್ಗೆ ಗೊತ್ತಿಲ್ಲ. ಸಾಮಾನ್ಯವಾಗಿ ಕೆಪಿಸಿಸಿ ಅಧ್ಯಕ್ಷರು, ಸಿಎಲ್ ಪಿ ನಾಯಕರೇ ಸಿಎಂ ಆಗುತ್ತಾರೆ. ಇದು ಕಾಂಗ್ರೆಸ್ ನಲ್ಲಿ ನಡೆದುಕೊಂಡು ಬಂದಿದೆ ಎಂದರು.

Key words: Health Minister- Dr K Sudhakar –Delhi-covid-vaccine