ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆರೋಗ್ಯ ಸಚಿವ ಶ್ರೀರಾಮುಲು ಭೇಟಿ: ಪರಿಶೀಲನೆ…

Promotion

ಬೆಂಗಳೂರು,ಮಾ,10,2020(www.justkannada.in):  ಪ್ರಪಂಚದಾದ್ಯಂತ ಭೀತಿ ಹುಟ್ಟಿಸಿರುವ ಕೊರೋನಾ ವೈರಸ್ ನಮ್ಮ ದೇಶ ಹಾಗೂ ರಾಜ್ಯದಲ್ಲೂ ಆತಂಕ ಸೃಷ್ಠಿಸಿದೆ. ಈ ಹಿನ್ನೆಲೆ ದೇಶ, ರಾಜ್ಯದ ಎಲ್ಲಾ ಏರ್ ಪೋರ್ಟ್ ಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು ವಿದೇಶದಿಂದ ಬರುವವರನ್ನ ತಪಾಸಣೆಗೆ ಒಳಪಡಿಸಲಾಗುತ್ತಿದೆ.

ಈ ನಡುವೆ ಆರೋಗ್ಯ ಸಚಿವ ಶ್ರೀರಾಮುಲು ಇಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಕೊರೋನಾ ವೈರಸ್ ಸಂಬಂಧ ಮುಂಜಾಗ್ರತ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು, ಹಾಗೆಯೇ ಅಲ್ಲಿನ ವೈದ್ಯರ ಕಾರ್ಯನಿರ್ವಹಣೆ ಬಗ್ಗೆಯೂ ಪರಿಶೀಲಿಸಿದರು.  ಈ ವೇಳೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

Key words: Health Minister -Sriramulu –visits- Kempegowda International Airport