11ನೇ ದಿನಕ್ಕೆ ಕಾಲಿಟ್ಟ ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿಭಟನೆ

ಮೈಸೂರು,ಅಕ್ಟೊಂಬರ್,04,2020(www.justkannada.in) : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಪ್ರತಿಭಟನೆಯು 11ನೇ ದಿನಕ್ಕೆ ಕಾಲಿಟ್ಟಿದೆ.jk-logo-justkannada-logoಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಬಳಿ ರಾಜ್ಯ ಸರ್ಕಾರದ ವಿರುದ್ಧ ಆರೋಗ್ಯ ಇಲಾಖೆ ಸಿಬ್ಬಂದಿ  ಧಿಕ್ಕಾರ ಕೂಗಿದರು.

ಆರೋಗ್ಯ ಇಲಾಖೆ ಸಿಬ್ಬಂದಿ  ಮೇಲೆ ರಾಜ್ಯ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ. ಸಮಾನ ವೇತನ ಹಾಗೂ ಸೇವಾ ಭದ್ರತೆ ಕಲ್ಪಿಸುವಲ್ಲಿ ವಿಫಲವಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದರು.Health-Department-staff-protesting-11thಕೋವಿಡ್ ಸಂದರ್ಭದಲ್ಲಿ ಕಾರ್ಯನಿರ್ವಹಿಸುವ ಆರೋಗ್ಯ ಸಿಬ್ಬಂದಿಗೆ ವಿಮಾ ಯೋಜನೆ ಕಲ್ಪಿಸಿಲ್ಲ. ನಮ್ಮ ನಿರಂತರ ಹೋರಾಟದ ಬಗ್ಗೆ ಗಮನಹರಿಸದೇ ನಿರ್ಲಕ್ಷ್ಯವಹಿಸಿದೆ. ಕೂಡಲೇ ಸರ್ಕಾರ ನಮ್ಮ ಬೇಡಿಕೆಗಳ ಈಡೇರಿಸದಿದ್ದಲ್ಲಿ ಪ್ರತಿಭಟನೆ ಉಗ್ರರೂಪ ತಾಳುವುದು ಎಂದು ಎಚ್ಚರಿಕೆ ನೀಡಿದರು.

key words : Health-Department-staff-protesting-11th