ಇಂದಿನಿಂದ ನಾಲ್ಕು ದಿನಗಳ ಕಾಲ ಬೆಂಗಳೂರಿನಲ್ಲಿ ಭಾರಿ ಮಳೆಯ ಮುನ್ಸೂಚನೆ..

Promotion

ಬೆಂಗಳೂರು, ಅ,17,2019(www.justkannada.in):  ಇಂದಿನಿಂದ ನಾಲ್ಕು ದಿನಗಳ ಕಾಲ ಬೆಂಗಳೂರಿನಲ್ಲಿ ಬಾರಿ ಮಳೆಯಾಗಲಿದೆ ಎಂದು ರಾಜ್ಯ ಹವಮಾನ ಇಲಾಖೆ ಅಧಿಕಾರಿ  ರಾಜು ರಮೇಶ್ ಮಾಹಿತಿ ನೀಡಿದ್ದಾರೆ.

ನಗರದಲ್ಲಿ ಇಂದು ಸಂಜೆ ವೇಳೆಗೆ ಭಾರಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕಳೆದ ಒಂದು ವಾರದಿಂದ ಬೆಂಗಳೂರಲ್ಲಿ ಪ್ರತಿ ದಿನ ಸಂಜೆ ಮಳೆ ಬರುತ್ತಿದ್ದು, ಕಳೆದ ಎರಡು ದಿನಗಳಿಂದ ಸ್ವಲ್ಪ ಕಡಿಮೆಯಾಗಿದೆ. ಆದರೆ  ಮುಂದಿನ 48 ಗಂಟೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಲ್ಲದೆ ದಕ್ಷಿಣ ಒಳನಾಡಿನಲ್ಲಿ ಮೈಸೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ ಎಂದು ರಾಜ್ಯ ಹವಮಾನ ಇಲಾಖೆ ತಿಳಿಸಿದೆ.

Key words: Heavy rain – Bangalore -four days