ಬೆಂಗಳೂರಿನಲ್ಲಿ ಭಾರಿ ಮಳೆ ಅವಾಂತರ: ಸಿಟಿ ರೌಂಡ್ಸ್ ಗೆ ಮುಂದಾದ ಸಿಎಂ ಬೊಮ್ಮಾಯಿ.

ಬೆಂಗಳೂರು,ಮೇ,18,2022(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಗೆ ಜನ ತತ್ತರಿಸಿದ್ದು ವರುಣನ ಅಬ್ಬರದಿಂದ ನಗರದ ಹಲವು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಠಿಯಾಗಿದೆ. ಈ  ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಿಟಿ ರೌಂಡ್ಸ್ ಗೆ ಮುಂದಾಗಿದ್ದಾರೆ.

ಹೊಸಕೆರಹಳ್ಳಿ ಆರ್ ಆರ್ ನಗರಕ್ಕೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ ಅವರು,  ಬೆಂಗಳೂರಿನ ಹಲವೆಡೆ ಭಾರಿ ಮಳೆಯಾಗಿದೆ.  ಹೀಗಾಗಿ ಬಿಬಿಎಂಪಿ ಆಯುಕ್ತರ ಜತೆ ಚರ್ಚಿಸಿದ್ದೇನೆ. ಕಂಟ್ರೋಲ್ ರೂಂ ಸ್ಥಾಪಿಸಲು ಸೂಚನೆ ನೀಡಿದ್ದೇನೆ.  ಟಾಸ್ಕ್ ಪೋರ್ಸ್ ಎಸ್ ಡಿಆರ್ ಎಫ್ ಅಲರ್ಟ್ ಆಗಿವೆ ಎಂದರು.

ಬೆಂಗಳೂರಿನ ವಿವಿಧ ಕಡೆ ಕಾಮಗಾರಿ ನಡೆಯುತ್ತಿದೆ.  ಕಾಮಗಾರಿಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಠಿಯಾಗಿದೆ.  ಮನೆ ಹಾನಿಯಾಗಿದ್ದರೇ ಪರಿಹಾರ ನೀಡುತ್ತೇವೆ. ಮುಂಜಾಗ್ರತಾ ಕ್ರಮಕೈಗೊಳ್ಳಲು ಸೂಚನೆ ನೀಡಿದ್ದೇನೆ. ಮಳೆಹಾನಿ ಪ್ರದೇಶಕ್ಕೆ  ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

Key words: Heavy- rain – Bengaluru-CM Bommai – City Rounds.