ರಾಜ್ಯದಲ್ಲಿ ಭಾರಿ ಮಳೆ ಸಂಭವ: ಅಧಿಕಾರಿಗಳ ಜತೆ ಸಭೆ ನಡೆಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ.

kannada t-shirts

ಬೆಂಗಳೂರು,ಜುಲೈ,16,2021(www.justkannada.in): ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆಯ ಸಂಭವವಿರುವ ಹಿನ್ನಲೆಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳೊಂದಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ  ಸಭೆ ನಡೆಸಿ ಚರ್ಚಿಸಿದರು.jk

ಇಂದು ಬೆಳಿಗ್ಗೆ 9 ಗಂಟೆಗೆ ತಮ್ಮ ದೆಹಲಿಯ ಕಛೇರಿ ಕೃಷಿ ಭವನಕ್ಕೆ ತೆರಳಿ ವಿಡಿಯೋ ಕಾನ್ಫೆರನ್ಸ್ ಮೂಲಕ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಳೆಯಿಂದಾಗಲಿರುವ ಪೃಕತಿ ವಿಕೋಪಗಳ ಕುರಿತು, ಜಿಲ್ಲೆಯಲ್ಲಿನ ಕೋವಿಡ್ ನಿರ್ವಹಣೆ, ಮೂರನೇ ಅಲೆಗೆ ಜಿಲ್ಲೆ ನಡೆಸಿರುವ ತಯಾರಿಗಳು ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಚರ್ಚಿಸಿ ಮಾಹಿತಿ ಪಡೆದರು.

ಅಲ್ಲದೆ ಇದೇ ವೇಳೆ ಕ್ಷಣ ಕ್ಷಣದ ಮಾಹಿತಿ ನೀಡುವಂತೆ ಸೂಚಿಸಿದ್ದು, ಜನರ ಕಷ್ಟ ನಷ್ಟಗಳಿಗೆ ಧಾವಿಸುವ ಸಂದರ್ಭ ಒದಗಿಬಂದರೆ ಸೂಕ್ತ ವ್ಯವಸ್ಥೆ ಹೊಂದಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸಂಸದೆ ಶೋಭಾ ಕರಂದ್ಲಾಜೆ ಸೂಚಿಸಿದರು. ಈ ಮೂಲಕ ದೆಹಲಿಯಿಂದಲೇ ತಮ್ಮ ಸಂಸದೀಯ ಕ್ಷೇತ್ರದ ಜನರ ಮತ್ತು ರೈತರ ಕಾಳಜಿಯ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಳಕಳಿ ವ್ಯಕ್ತಪಡಿಸಿದರು.

Key words: Heavy –rain- coastal areas-Union Minister -Shobha Karandlaje-meeting

website developers in mysore