Sunday, October 11, 2026

Dasara Wishes

Happy Dasara
Home Front Page ಬೆಂಗಳೂರು, ಮೈಸೂರು ಸೇರಿ ರಾಜ್ಯದ ಹಲವೆಡೆ ನಾಲ್ಕು ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ಮೈಸೂರು ಸೇರಿ ರಾಜ್ಯದ ಹಲವೆಡೆ ನಾಲ್ಕು ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ಸೆಪ್ಟೆಂಬರ್ 11, 2022 (www.justkannada.in): ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇನ್ನೂ ನಾಲ್ಕು ದಿನ ಮಳೆಯ ಆರ್ಭಟ ಮುಂದುವರೆಯಲಿದೆ.

ಈ ಸಂಬಂಧ ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

ಇಂದಿನಿಂದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ರಾಯಚೂರು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ರಾಯಚೂರು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.