ಮುಂದಿನ ನಾಲ್ಕರಿಂದ ಐದು ದಿನ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Promotion

ಬೆಂಗಳೂರು, ಸೆಪ್ಟೆಂಬರ್ 04, 2022 (www.justkannada.in): ಮುಂದಿನ ನಾಲ್ಕರಿಂದ ಐದು ದಿನಗಳ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಮುಂದಿನ ನಾಲ್ಕರಿಂದ ಐದು ದಿನಗಳಲ್ಲಿ ದಕ್ಷಿಣ ಪೆನಿನ್ಸುಲರ್ ಮತ್ತು ಈಶಾನ್ಯ ಭಾರತದಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಈ ಕುರಿತು ಎಚ್ಚರಿಕೆ ವಹಿಸಬೇಕೆಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾದ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕ, ಉತ್ತರ ಒಳನಾಡಿನ ಕರ್ನಾಟಕ ಭಾಗಗಳಲ್ಲಿ ಸೆಪ್ಟೆಂಬರ್ 7 ರವರೆಗೆ ಭಾರೀ ಮಳೆ ಬೀಳುವ ಸಾಧ್ಯತೆ ಇದೆ.

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.