ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆ: ಹವಮಾನ ಇಲಾಖೆ ಮುನ್ಸೂಚನೆ.

Promotion

ಬೆಂಗಳೂರು,ಆಗಸ್ಟ್,4,2022(www.justkannada.in): ರಾಜ್ಯದಲ್ಲಿ ಈಗಾಗಲೇ ಮಳೆರಾಯನ ಅಬ್ಬರದಿಂದಾಗಿ ಸಾಕಷ್ಟು ಹಾನಿಯುಂಟಾಗಿದ್ದು, ಈ ಮಧ್ಯೆ ಇನ್ನೂ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂಧು ರಾಜ್ಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಭಾಗದಲ್ಲಿ ಇನ್ನೂ 3 ದಿನಗಳ ಕಾಲ ಕರಾವಳಿ ಭಾಗದಲ್ಲಿ ವರುಣರಾಯ ಆರ್ಭಟಿಸಲಿದ್ದಾರೆ. ಹೀಗಾಗಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಅರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಾಳೆ ರೆಡ್ ಅಲರ್ಟ್ ಘೋಷಣೆಯಾಗಲಿದೆ. ಇನ್ನು ಉತ್ತರ ಒಳನಾಡು ಬಾಗಲಕೋಟೆ ,ಬೆಳಗಾವಿ,ಬೀದರ್, ಗದಗ ಕಲ್ಬುರ್ಗಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಂಡ್ಯ, ಮೈಸೂರು, ಬೆಂಗಳೂರು ಭಾಗಗಳಲ್ಲೂ ಭಾರಿ ಮಳೆಯಾಗಿದ್ದು, ಇದೀಗ ಮತ್ತೆ ವರುಣನ ಆರ್ಭಟ ಮುಂದುವರೆಯಲಿದೆ ಎನ್ನಲಾಗಿದೆ.

Key words: Heavy rain – next -5 days.