ಮಹಾಮಳೆಗೆ ಬೆಳಗಾವಿಯಲ್ಲಿ ಮತ್ತೊಂದು ಬಲಿ: ಭೂಕುಸಿತದಿಂದ ಪುಣೆ -ಬೆಂಗಳೂರು ರಸ್ತೆ ಸಂಪರ್ಕ ಕಡಿತ…

kannada t-shirts

ಬೆಳಗಾವಿ,ಆ,6,2019(www.justkannada.in): ಮಹಾರಾಷ್ಟ್ರದಲ್ಲಿ ಬಾರಿ ಮಳೆಯಾಗುತ್ತಿರುವ ಹಿನ್ನೆಲೆ ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿಯುತ್ತಿದ್ದು ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ.

ಮಹಾ ಮಳೆಗೆ ಬೆಳಗಾವಿಯಲ್ಲಿ ಮತ್ತೊಂದು ಬಲಿಯಾಗಿದ್ದು, ಸತತ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆ.ಮನೆ ಗೋಡೆ ಕುಸಿದು ವ್ಯಕ್ತಿ ಸಾವನ್ನಪ್ಪಿದ್ದಾನೆ. ನಾಗಪ್ಪ ಮಾದರ್ (25) ಮೃತಪಟ್ಟ ವ್ಯಕ್ತಿ . ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹೊಸಕೊಟೆಯಲ್ಲಿ ಈ  ಘಟನೆ ನಡೆದಿದೆ.

ಸತತ ಸುರಿಯುತ್ತಿರುವ ‌ಮಳೆಗೆ ಹಳೆ ಮನೆಯ ಗೋಡೆ ಕುಸಿದು ನಾಗಪ್ಪ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆ ಗೆ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ. ಚಿಕಿತ್ಸೆ ಫಲಿಸದೇ ವ್ಯಕ್ತಿ ಸಾವನ್ನಪ್ಪಿದ್ದಾನೆ. ಈ ಕುರಿತು ಬೈಲಹೊಂಗಲ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾರಾಷ್ಟ್ರದಲ್ಲಿ  ನಿರಂತರ ಸುರಿಯುತ್ತಿರುವ ಭಾರಿ ಮಳೆಗೆ  ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಭಾರಿ ಪ್ರಮಾಣದ ಭೂಕುಸಿತ ಉಂಟಾಗಿದೆ. ಇದರಿಂದಾಗಿ ಪುಣೆ- ಬೆಂಗಳೂರು ರಸ್ತೆ ಸಂಪರ್ಕ ಕಡಿತವಾಗಿದ್ದು, ನಾಳೆ ಮಧ್ಯಾಹ್ನದವರೆಗೂ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ -4 ಬೆಂಗಳೂರಿನಿಂದ ಬೆಳಗಾವಿ ಮಾರ್ಗವಾಗಿ ಪುಣೆಗೆ ಸಂಪರ್ಕಿಸುತ್ತಿತ್ತು . ಈ ನಡುವೆ ಬೆಳಗಾವಿಯಿಂದ ಕೊಲ್ಲಾಪುರ ಕಡೆಗೆ ಯಾರು ಪ್ರಯಾಣ ಮಾಡದಂತೆ ಉತ್ತರ ಐಜಿಪಿ ರಾಘವೇಂದ್ರ ಸುಹಾಸ್ ಮನವಿ ಮಾಡಿದ್ದಾರೆ.

Key words: Heavy rain- person diad-Belgavi -Pune-Bangalore -road – Traffic- breakdown

website developers in mysore