ರಾಜ್ಯದಲ್ಲಿ ಭಾರಿ ಮಳೆ, ಹಾನಿ ಹಿನ್ನೆಲೆ: ಇಂದು ಅಧಿಕಾರಿಗಳ ಜತೆ ಸಿಎಂ ಬೊಮ್ಮಾಯಿ ವಿಡಿಯೋ ಸಂವಾದ.

Promotion

ಬೆಂಗಳೂರು,ಜುಲೈ,8,2022(www.justkannada.in):  ರಾಜ್ಯದಲ್ಲಿ ಕರಾವಳಿ  ಮತ್ತು ಮಲೆನಾಡು ಭಾಗದಲ್ಲಿ ವರುಣನ ಆರ್ಭಟಕ್ಕೆ ಜೋರಾಗಿದ್ದು, ಹಲವೆಡೆ ಭೂಕುಸಿತ ಉಂಟಾಗಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ.

ಭಾರಿ ಮಳೆಯಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.  ಮುಂಜಾಗ್ರತಾ ಕ್ರಮವಾಗಿ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.border-districts-state-covid-negative-test-outside-states-minister-basavaraja-bommai

ಈ ಮಧ್ಯೆ ರಾಜ್ಯದಲ್ಲಿ ನಿರಂತರ ಮಳೆ ಹಾಗೂ ಅಪಾರ ಹಾನಿ ಹಿನ್ನೆಲೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಇಂದು ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ  ಜಿಲ್ಲಾಧಿಕಾರಿಗಳು ಜಿಲ್ಲಾ ಪಂಚಾಯತ್ ಸಿಇಒಗಳ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಲಿರುವ ಸಿಎಂ ಬೊಮ್ಮಾಯಿ, ಮಳೆಹಾನಿ ಬಗ್ಗೆ ಮಾಹಿತಿ ಪಡೆಯಲಿದ್ದಾರೆ ಎನ್ನಲಾಗಿದೆ.

Key words: Heavy rain – state-CM Bommai -video conversation -officials -today