ಮುಂದಿನ ನಾಲ್ಕೈದು ದಿನ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ.

ಬೆಂಗಳೂರು,ಅಕ್ಟೋಬರ್,17,2022(www.justkannada.in): ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಮುಂದಿನ ನಾಲ್ಕೈದು ದಿನ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಯಲ್ಲಿ ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗಲಿದ್ದು 5 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಅಕ್ಟೋಬರ್ 20 ರಿಂದ 22ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ ಕೊಡಗು, ಶಿವಮೊಗ್ಗದಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.  ಬೆಂಗಳೂರಿನಲ್ಲಿ ಮುಂದಿನ ಎರಡು ಮೂರು ದಿನ ಭಾರಿ ಮಳೆ ಸಾಧ್ಯತೆ ಇದ್ದು,  ಹಂತ ಹಂತವಾಗಿ ಚಳಿ ಪ್ರಮಾಣ ಏರಿಕೆಯಾಗಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

Key words: Heavy rain -state – next -four – five days.