ಅಕ್ಟೋಬರ್ 16ರವರೆಗೆ ಮೈಸೂರು ಸೇರಿ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ಅಕ್ಟೋಬರ್ 12, 2021 (www.justkannada.in): ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 16ರವರೆಗೆ ಅತ್ಯಧಿಕ ಮಳೆಯಾಗಲಿದೆ.

ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಎಚ್ಚರಿಕೆ ವಹಿಸುವಂತೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಇಂದು ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.

key words: Heavy rains are likely in the coastal and southern inland areas of karnataka until October 16

ENGLISH SUMMARY…

Including Mysuru, the coastal Karnataka and inland areass may witness huge rainfall till October 16
Bengaluru, October 12, 2021 (www.justkannada.in): The coastal Karnataka and southern inland region of the State may witness huge rainfall till October 16, according to the information provided by the Meteorological Department.
There will be intensive rainfall in several districts of the State, including Dakshin Kannada, Uttar Kannada, Udupi, Bengaluru Rural District, Bengaluru Urban, Chamarajanagara, Chikkaballapura, Chikkamagaluru, Chitradurga, Davanagere, Hassan, Kolar, Kodagu, Mandya, Mysuru, Ramanagara, Shivamogga, Tumakuru.
Keywords: Meteorological Department/ rainfall/October 16