ಮತ್ತೆ ರಾಜ್ಯದಲ್ಲಿ ವರುಣನ ಆರ್ಭಟ ಶುರು

Promotion

ಮೈಸೂರು, ಸೆಪ್ಟೆಂಬರ್‌ 02, 2020 (www.justkannada.in):

ಮತ್ತೆ ರಾಜ್ಯದಲ್ಲಿ ವರುಣನ ಆರ್ಭಟ ಶುರುವಾಗಿದೆ.

5 ದಿನ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ ಇದೆ. ಭಾರಿ ಮಳೆ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಲ್ಪ ದಿನಗಳ ಬಿಡುವು ನೀಡಿದ್ದ ವರುಣ ದೇವ ಮತ್ತೆ ಆರ್ಭಟ ಶುರು ಮಾಡಿದ್ದಾನೆ.

ಮೈಸೂರು, ಮಂಡ್ಯ ಹಾಗೂ ಚಾಮರಾಜನಗರದಲ್ಲಿ ಉತ್ತಮ ಮಳೆ ಸಾಧ್ಯತೆ ಇದೆ.

ಕೊಡಗು ಹಾಗೂ ಹಾಸನಗಳಲ್ಲಿ ಭಾರಿ ಮಳೆ ಸಾಧ್ಯತೆ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಭಾರಿ ಮಳೆ ಹಿನ್ನೆಲೆಯಲ್ಲಿ ಕೊಡಗು ಹಾಗೂ ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್

ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಿದ ರಾಜ್ಯ ಹವಾಮಾನ ಇಲಾಖೆ