ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ : ನದಿ ಪಾತ್ರದಲ್ಲಿ ಪ್ರವಾಹ ಮುನ್ನೆಚ್ಚರಿಕೆಗೆ ಸೂಚನೆ.

kannada t-shirts

ಮೈಸೂರು,ಜುಲೈ,7,2022(www.justkannada.in):  ಈ ಬಾರಿ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಕರಾವಳಿ, ಮಲೆನಾಡು ಭಾಗ ಸೇರಿದಂತೆ ಹಲವು ಕಡೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ವರುಣನ ಅಬ್ಬರದಿಂದಾಗಿ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿದ್ದು ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ.

ಈ ನಡುವೆ ಕಬಿನಿ ಜಲಾನಯನ ಪ್ರದೇಶದಲ್ಲಿ ಬಾರಿ ಮಳೆ ಹಿನ್ನಲೆ, ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಜಲಾಶಯದಿಂದ ಹೆಚ್ಚುವರಿ ನೀರನ್ನು ಯಾವುದೇ ಸಂದರ್ಭದಲ್ಲಾದರೂ ನದಿಗೆ ಬಿಡುವ  ಸಾಧ್ಯತೆ ಇದೆ. ಹೀಗಾಗಿ ನದಿ ಪಾತ್ರದಲ್ಲಿ ಪ್ರವಾಹ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

ಈ ಕುರಿತು ಕಬಿನಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆ ಹೊರಡಿಸಿದ್ದು, ಕಬಿನಿ ನದಿಯ ತಗ್ಗು ಪ್ರದೇಶದಲ್ಲಿರುವವರು ಸ್ಥಳಾಂತರಕ್ಕೆ ಸೂಚನೆ ನೀಡಲಾಗಿದೆ. ನದಿಯ ಎರಡೂ ದಂಡೆಗಳಲ್ಲಿ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸುವಂತೆ ಆದೇಶ ಹೊರಡಿಸಿದ್ದಾರೆ.

Key words: Heavy- rains – Kabini -flood -prevention -river

website developers in mysore