ಚಾಲೆಂಜಿಂಗ್ ಸ್ಟಾರ್ ‘ಕಾಟೇರ’ ಚಿತ್ರ ಕುರಿತ ಅಪ್ಡೇಟ್ ನ್ಯೂಸ್ ಇಲ್ಲಿದೆ…!

Here is the update news about Challenging Star darshan 'Katera' movie...!
Here is the update news about Challenging Star 'Katera' movie...!
Promotion

ಬೆಂಗಳೂರು, ಸೆಪ್ಟೆಂಬರ್ 13, 2023 (www.justkannada.in): ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಹುನಿರೀಕ್ಷೆಯ ಕಾಟೇರ ಚಿತ್ರದ ಅಪ್ಡೇಟ್ ಸಿಕ್ಕಿದೆ.

ಕಾಟೇರ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದ್ದು, ಈ ತನಕ ನೂರು ದಿನಗಳ ಚಿತ್ರೀಕರಣವಾಗಿದೆ. ಮೂರು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ.

ಕಾಟೇರ ಎಪ್ಪತ್ತರ ದಶಕದಲ್ಲಿ ನಡೆಯುವ ಕಥೆ. ಹಾಗಾಗಿ ಈ ಸ್ಥಳದಲ್ಲಿ ಹಳ್ಳಿಯ ಸೆಟ್ ಹಾಕಿ ಚಿತ್ರೀಕರಣ ಮಾಡಿದ್ದೇವೆ. ಇನ್ನು ಕೆಲವೇ ದಿನಗಳಲ್ಲಿ ಚಿತ್ರೀಕರಣ ಮುಕ್ತಾಯವಾಗಲಿದೆ ಎಂದು ಚಿತ್ರದ ನಿರ್ದೇಶಕ ತರುಣ್ ಮಾಹಿತಿ ಹಂಚಿಕೊಂಡಿದ್ದಾರೆ.

ಚಾಲೆಂಜಿಂಗ್ ಸ್ಟಾರ್’ಗೆ ನಾಯಕಿಯಾಗಿ ಮೊದಲ ಬಾರಿಗೆ ಮಾಲಾಶ್ರೀ ಅವರ ಮಗಳು ಆರಾಧನಾ ಅಭಿನಯಿಸುತ್ತಿದ್ದಾರೆ. ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನೀಡುತ್ತಿದ್ದಾರೆ.

ರಾಕ್ ಲೈನ್ ವೆಂಕಟೇಶ್ ಅವರು ಅದ್ದೂರಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ‌. ತರುಣ್ ಹಾಗೂ ಜಡೇಶ್ ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ.