ರಾಜ್ಯದಲ್ಲಿ ವಾರಾಂತ್ಯದ ಕರ್ಫ್ಯೂ: ಏನುಂಟು, ಏನಿಲ್ಲ? ಇಲ್ಲಿದೆ ಮಾಹಿತಿ

ಬೆಂಗಳೂರು, ಜೂನ್ 26, 2021 (www.justkannada.in): ಇಂದಿನಿಂದ ರಾಜ್ಯದಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ.

ಜೂನ್ 28 ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವಾರಂತ್ಯದ ಕರ್ಫ್ಯೂ ರಾಜ್ಯಾದ್ಯಂತ ಜಾರಿಯಲ್ಲಿರುತ್ತದೆ. ಅನಗತ್ಯವಾಗಿ ಸಂಚಾರ ನಡೆಸಿದರೆ ವಾಹನಗಳನ್ನು ವಶಕ್ಕೆ ಪಡೆಯಲಾಗುತ್ತದೆ ಎಂದು ಪೊಲೀಸರು ಎಚ್ಚರಿಸಿದ್ದಾರೆ.

ಸರ್ಕಾರದ ಮಾರ್ಗಸೂಚಿ ಪ್ರಕಾರ ಶನಿವಾರ ಮತ್ತು ಭಾನುವಾರ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ದಿನಸಿ, ತರಕಾರಿ, ಹಾಲು, ಮಾಂಸ, ಪ್ರಾಣಿಗಳಿಗೆ ಆಹಾರ ಮತ್ತಿತರ ಅಗತ್ಯವಸ್ತುಗಳು ಮತ್ತು ಮದ್ಯ ಮಾರಾಟಕ್ಕೆ ಅವಕಾಶವಿದೆ.

ಈ ಅವಧಿಯಲ್ಲಿ ಬೀದಿಬದಿ ವ್ಯಾಪಾರ ಚಟುವಟಿಕೆಗಳು ನಡೆಯಲಿವೆ. ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ನಡೆಯಲಿದೆ. ವ್ಯಾಪಾರಿಗಳು ಕೋವಿಡ್-19ರ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ.break-new-year-night-curfew-two-days-delhi