ಕರ್ನಾಟಕದ ಗಡಿ ಭಾಗದಲ್ಲಿ ಹೈ-ಅಲರ್ಟ್: ನೆಗಟಟಿವ್ ರಿಪೋರ್ಟ್ ಇದ್ದವರಿಗೆ ಮಾತ್ರ ಪ್ರವೇಶ

ಬೆಂಗಳೂರು, ನವೆಂಬರ್ 2021 (www.justkannada.in): ಕರ್ನಾಟಕದ ಗಡಿ ಭಾಗದಲ್ಲಿ ಹೈ-ಅಲರ್ಟ್ ಆಗಿರುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ.

ಮೈಸೂರು, ಚಾಮರಾಜನಗರ, ಕೊಡಗು ಗಡಿ ಭಾಗಗಳಲ್ಲಿ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ. ಕರ್ನಾಟಕ ಪ್ರವೇಶಿಸಲು ಎರಡು ಡೋಸ್ ಕೊರೋನಾ ಲಸಿಕೆ ಇಲ್ಲವೇ, ಆರ್ ಟಿ ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯವಾಗಿದೆ.

ಕರ್ನಾಟಕದಲ್ಲೂ ರೂಪಾಂತರಿ ಹೊಸ ವೈರಸ್ ಬಗ್ಗೆ ಎಚ್ಚರಿಕೆ ವಹಿಸಲಾಗಿದೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ರಾಜ್ಯಕ್ಕೆ ಆಗಮಿಸುವಂತೆ ಪ್ರಯಾಣಿಕರನ್ನು ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

ಕೇರಳಾ ಹಾಗೂ ಮಹಾರಾಷ್ಟ್ರದಿಂದ ಬರುವವರ ಮೇಲೆ ಮತ್ತಷ್ಟು ಹೆಚ್ಚಿನ ನಿಗಾ ಇಡಲಾಗಿದೆ. ಎರಡು ಡೋಸ್ ಲಸಿಕೆ ಇಲ್ಲವೇ ಆರ್ ಟಿ ಪಿಸಿಆರ್ ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ರಾಜ್ಯಕ್ಕೆ ಎಂಟ್ರಿ ಆಗೋದಕ್ಕೆ ಅವಕಾಶ ನೀಡಲಾಗುತ್ತಿದೆ.