ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್: 3 ವಾರಗಳ ಕಾಲ ಮುಷ್ಕರ ನಡೆಸದಂತೆ ಆದೇಶ.

Promotion

ಬೆಂಗಳೂರು,ಮಾರ್ಚ್,23,2023(www.justkannada.in): ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದ್ದು,  ಮೂರು ವಾರಗಳ ಕಾಲ ಯಾವುದೇ ಮುಷ್ಕರ ನಡೆಸದಂತೆ ಕೋರ್ಟ್ ಆದೇಶಿಸಿದೆ.

ಸರ್ಕಾರಿ ನೌಕರರ ಸಮಾನ ವೇತನಕ್ಕೆ ಆಗ್ರಹಿಸಿ ನಾಳೆ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದರು. ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿತ್ತು . ಹೆಚ್ ಎಂ ವೆಂಕಟೇಶ್ ಎಂಬುವವರು ಸಲ್ಲಿಸಿದ್ದ ಪಿಐಎಲ್ ವಿಚಾರಣೆ  ನಡೆಯಿತು.

ಮಾರ್ಚ್ 20 ರಂದು ಕಾರ್ಮಿಕ ಇಲಾಖೆ ಆಯುಕ್ತರು ಸಭೆ ಕರೆದಿದ್ದರು. ಅದರ ಸಭೆ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ. ಹೀಗಾಗಿ ಏಪ್ರಿಲ್ 6ಕ್ಕೆ ಮುಂದಿನ ಸಭೆ ನಿಗದಿಪಡಿಸಲಾಗಿದೆ ಎಂದು ಸರ್ಕಾರಿ ವಕೀಲೆ ಪ್ರತಿಮಾ ಹೊನ್ನಾಪುರ  ಮಾಹಿತಿ ನೀಡಿದರು.

ಮುಷ್ಕರದಿಂದ ಸಾರ್ವಜನಿಕ ಸಾರಿಗೆ ಸ್ಥಗಿತವಾಗಲಿದೆ. ಇದರಿಂದ ವಿದ್ಯಾರ್ಥಿಗಳು, ನೌಕರರು ಪ್ರಯಾಣಿಕರಿಗೆ ತೊಂದರೆಯಾಗಲಿದೆ.  ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುತ್ತದೆ. ಏಪ್ರಿಲ್ 6 ರಂದು ಮುಂದಿನ ಸಭೆಯಿರುವ ಹಿನ್ನೆಲೆ ಮುಷ್ಕರ ಬೇಡ. ಮೂರು ವಾರಗಳ ಕಾಲ ಮುಷ್ಕರ ನಡೆಸದಂತೆ ಸಂಘಟನೆಗಳಿಗೆ  ಹೈಕೋರ್ಟ್ ಸಿಜೆ ಪ್ರಸನ್ನ ಬಿ ವರಾಳೆ,  ಅಶೋಕ್ ಎಸ್ ಕಿಣಗಿರ ಅವರಿದ್ದ ಪೀಠ ಸೂಚನೆ ನೀಡಿದೆ.

Key words: High Court –breaks- transport -workers’ –strike