ಎಸಿಬಿ ರಚನೆ ಆದೇಶ ರದ್ದುಪಡಿಸಿದ ಹೈಕೋರ್ಟ್: ಲೋಕಾಯುಕ್ತಕ್ಕೆ ಅಧಿಕಾರ

ಬೆಂಗಳೂರು,ಆಗಸ್ಟ್,11,2022(www.justkannada.in): ಎಸಿಬಿ ರಚನೆ ಆದೇಶವನ್ನ ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.

ಲೋಕಾಯುಕ್ತ ಪೊಲೀಸ್ ಠಾಣೆ ಸ್ಥಾನಮಾನ ರದ್ದು ವಿಚಾರಕ್ಕೆ ಸಂಬಂಧಿಸಿ ಎಸಿಬಿ ರಚನೆ ಪ್ರಶ್ನಿಸಿದ್ದ ಪಿಐಎಲ್ ಸಂಬಂಧ ಇಂದು ತೀರ್ಪು ಪ್ರಕಟಗೊಂಡಿದ್ದು, ಎಸಿಬಿಗೆ ಪೊಲೀಸ್ ಠಾಣೆ ಸ್ಥಾನಮಾನವನ್ನು ರದ್ದುಪಡಿಸಿ ನ್ಯಾ.ಬಿ.ವೀರಪ್ಪ, ನ್ಯಾ.ಕೆ.ಎಸ್.ಹೇಮಲೇಖಾರವರಿದ್ದ ಪೀಠ ತೀರ್ಪು ನೀಡಿದೆ. ಎಸಿಬಿ ಲೋಕಾಯುಕ್ತ ವ್ಯಾಪ್ತಿಗೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ಅಗತ್ಯವಿದೆ. ಮೂರು ವರ್ಷದ ಅವಧಿಗೆ ಅಧಿಕಾರಿಗಳ ನೇಮಕವಾಗಬೇಕು. ಲೋಕಾಯುಕ್ತರ ನೇಮಕ ವೇಳೆ ಅರ್ಹತೆ ಪರಿಗಣಿಸಬೇಕು. ಜಾತಿ ಆಧರಿಸಿ ಲೋಕಾಯುಕ್ತ, ಉಪಲೋಕಾಯುಕ್ತ ನೇಮಕವಾಗಬಾರದು. ಭ್ರಷ್ಟಾಚಾರ ಆರೋಪ ಹೊತ್ತವರು ಪಾರಾಗಬಾರದು. ಹೀಗಾಗಿ ಲೋಕಾಯುಕ್ತ ಪೊಲೀಸರೇ ತನಿಖೆ ಮುಂದುವರಿಸಬೇಕು ಎಂದು ಸರ್ಕಾರದ ಆದೇಶ ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.

ಇನ್ನು ಹೈಕೋರ್ಟ್ ಲೋಕಾಯುಕ್ತ ಪೊಲೀಸ್ ಠಾಣೆ ಸ್ಥಾನಮಾನ ಮರುಸ್ಥಾಪಿಸಿದೆ. ಎಲ್ಲಾ ಪ್ರಕರಣಗಳೂ ಲೋಕಾಯುಕ್ತ ಪೊಲೀಸರಿಗೆ ವರ್ಗಾವಣೆ ಮಾಡಿ ಆದೇಶಿಸಿದೆ. 2016ರಲ್ಲಿ ಸಿದ್ಧರಾಮಯ್ಯ ಸರ್ಕಾರದ ಅವಧಿಯಲ್ಲಿ ಎಸಿಬಿ ರಚನೆ ಮಾಡಲಾಗಿತ್ತು.

Key words: High Court –cancel- ACB –formation- order.