ಕೋವಿಡ್-19 ಜಾಗೃತಿ ಕಾರ್ಯಕ್ರಮಕ್ಕೆ ಹೈಕೋರ್ಟ್ ಸಿಜೆ ಎ.ಎಸ್ ಓಕಾ ಅವರಿಂದ ಚಾಲನೆ…

ಬೆಂಗಳೂರು, ಅಕ್ಟೋಬರ್ 14,2020(www.justkannada.in): ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ಉಚ್ಚ ನ್ಯಾಯಾಲಯ ಕಾನೂನು ಸೇವಾ ಸಮಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕರ್ನಾಟಕ ರಾಜ್ಯ ವಕೀಲರ ಪರಿಷತ್ ಹಾಗೂ ಬೆಂಗಳೂರು ವಕೀಲರ ಸಂಘ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕೋವಿಡ್-19 ಜಾಗೃತಿ “ಸುರಕ್ಷಿತವಾಗಿರಿ ಹಾಗೂ ಇತರರನ್ನು ಸುರಕ್ಷಿತವಾಗಿರಿಸಿ” ಕಾರ್ಯಕ್ರಮಕ್ಕೆ ಇಂದು ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ ಓಕಾ ಅವರು ಚಾಲನೆ ನೀಡಿದರು.jk-logo-justkannada-logo

ಇಂದು ರಾಜ್ಯ ಉಚ್ಛ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಭೋದಿಸಿದ ಹೈಕೋರ್ಟ್ ಸಿಜೆ ಅಭಯ್ ಶ್ರೀನಿವಾಸ್ ಓಕಾ, ನಂತರ ಸಾರ್ವಜನಿಕರ ಜಾಗೃತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವಿಶೇಷವಾಗಿ ನಿರ್ಮಿಸಿದ್ದ ಕೋವಿಡ್ ಜಾಗೃತಿ ಸಂದೇಶಗಳನ್ನು ಒಳಗೊಂಡ ಎಲ್.ಇ.ಡಿ ವಾಲ್ ಹೊಂದಿರುವ ವಾಹನಕ್ಕೆ ಚಾಲನೆ ನೀಡಿದರು.

ಕೋವಿಡ್-19 ಜಾಗೃತಿ ಸಂದೇಶಗಳನ್ನೊಳಗೊಂಡ ಭಿತ್ತಿಪತ್ರ ಹಾಗೂ ಸಂದೇಶಗಳೊಂದಿಗೆ ಹಲವಾರು ವಿಶೇಷ ವಾಹನದ ಜೊತೆಯಲ್ಲಿ ಸಿಟಿ ಸಿವಿಲ್ ಕೋರ್ಟ್ ಆವರಣದವರೆಗೆ ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು.

ಕರ್ನಾಟಕ ಉಚ್ಛ ನ್ಯಾಯಾಲಯ ಆವರಣದಿಂದ ಪ್ರಾರಂಭವಾದ ಕೋವಿಡ್-19 ಜಾಗೃತಿ ಜಾಥಾ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ವಿಶೇಷವಾಗಿ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶರು ಸೇರಿದಂತೆ ವಕೀಲರ ಸಂಘದ ಹಿರಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕೋವಿಡ್-19 ಜಾಗೃತಿ ವಾಹನ ಸಂಚಾರ:

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೋವಿಡ್-19 ಕುರಿತು, ವಿಶೇಷ ಸಂದೇಶಗಳನ್ನು ಹೊಂದಿರುವ ಎಲ್.ಇ.ಡಿ ವಾಹನವು ಇಂದು ಬೆಳಿಗ್ಗೆ ಕರ್ನಾಟಕ ರಾಜ್ಯ ಉಚ್ಛ ನ್ಯಾಯಲಯದಿಂದ ಪ್ರಾರಂಭವಾಗಿ ಸಿಟಿ ಸಿವಿಲ್ ಕೋರ್ಟ್ ಮುಖಾಂತರ ವಿಧಾನಸೌಧ, ಎಂ.ಜಿ. ರೋಡ್, ಕಂಟೋನ್ಮೆಂಟ್ ರೈಲ್ವೇ ಸ್ಟೇಷನ್, ಕಾರ್ಪೋರೇಷನ್ ಸರ್ಕಲ್, ಕೆ.ಆರ್.ಸರ್ಕಲ್, ಕೆ.ಆರ್. ಮಾರುಕಟ್ಟೆ, ಚಾಮರಾಜಪೇಟೆ, ಜಯನಗರ, ಜೆ.ಪಿ.ನಗರ, ಮುಖಾಂತರ ಇಂದು ರಾತ್ರಿ 8:30 ಗಂಟೆಗೆ ಬನಶಂಕರಿಯಲ್ಲಿ ಸಮಾರೋಪಗೊಳ್ಳಲಿದೆ.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಉಚ್ಛ ನ್ಯಾಯಲಯದ ನ್ಯಾಯ ಮೂರ್ತಿಗಳಾದ ಅರವಿಂದ್ ಕುಮಾರ್, ಅಲೋಕ್ ಆರಾಧೆ, ಶ್ರೀಮತಿ ಬಿ.ವಿ.ನಾಗರತ್ನ, ಶ್ರೀಮತಿ ಸುಜಾತ, ಬಿ.ವೀರಪ್ಪ, ಜಿ.ನರೇಂದ್ರ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಡಾ.ಪಿ.ಎಸ್.ಹರ್ಷ ಅವರು ಉಪಸ್ಥಿತರಿದ್ದರು.

Key words: High Court –CJ- AS Oka – covid-19 Awareness- Program – Department of Information and Public Relations