ಶಾಲಾ ವಿದ್ಯಾರ್ಥಿಗಳಿಗೆ ಆನ್’ಲೈನ್ ಶಿಕ್ಷಣಕ್ಕೆ ಅಸ್ತು ಎಂದ ಹೈಕೋರ್ಟ್: ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ

Promotion

ಬೆಂಗಳೂರು,ಜು,8,2020(www.justkannada.in): ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ನಿಷೇಧಿಸಿ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಈ ಮೂಲಕ ಆನ್ ಲೈನ್ ಶಿಕ್ಷಣಕ್ಕೆ ಹೈಕೋರ್ಟ್ ಅಸ್ತು ಎಂದಿದೆ.

ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿರುವ ಹೈಕೋರ್ಟ್ ಸಿ.ಜೆ ಎಎಸ್ ಓಕಾ ಅವರಿದ್ದ ಪೀಠ, ಆನ್ ಲೈನ್ ಶಿಕ್ಷಣ ವಿದ್ಯಾರ್ಥಿಗಳ ಮೂಲಭೂತ ಹಕ್ಕು. ಸರ್ಕಾರ ಮೂಲಭೂತಹಕ್ಕನ್ನ ನಿರ್ಬಂಧಿಸುವಂತಿಲ್ಲ ಎಂದು ಸರ್ಕಾರಕ್ಕೆ ಸೂಚನೆ ನೀಡಿದೆ.

Key words: High Court – online education – school children.