ಸಾಕು ಪ್ರಾಣಿ ಪ್ರಿಯರಿಗೆ ಹೈಕೋರ್ಟ್ ಶಾಕ್ !

Promotion

ಬೆಂಗಳೂರು, ಡಿಸೆಂಬರ್ 12, 12, 2021 (www.justkannada.in): ಕಬ್ಬನ್ ಪಾರ್ಕ್ ಸೇರಿದಂತೆ ಯಾವುದೇ ಉದ್ಯಾನವನಗಳಿಗೆ ಯಾವುದೇ ಸಾಕು ಪ್ರಾಣಿಗಳ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಹೈಕೋರ್ಟ್ ಆದೇಶಿಸಿದೆ.

ಕಬ್ಬನ್ ಪಾರ್ಕ್ ಸೇರಿದಂತೆ ಯಾವುದೇ ಉದ್ಯಾನವನಗಳಿಗೆ ಯಾವುದೇ ಸಾಕು ಪ್ರಾಣಿಗಳ ಪ್ರವೇಶಕ್ಕೆ ಅವಕಾಶ ನೀಡಬಾರದು, ಈ ವೇಳೆ ಪಾಲಿಕೆ ಇದನ್ನು ಗಂಭೀರವಾಗಿ ಪರಿಗಣಿಸಬೇಕು, ಒಂದು ವೇಳೆ ಕ್ರಮ ಕೈಗೊಳ್ಳದಿದ್ದರೆ ನಾವೇ ಆದೇಶ ಹೊರಡಿಸಬೇಕಾಗುತ್ತದೆ ಎಂದು ಸೂಚನೆ ನೀಡಿದೆ.

ಕಬ್ಬನ್ ಪಾರ್ಕ ನಡಿಗೆದಾರರ ಸಂಘ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಉದ್ಯಾನವನಕ್ಕೆ ಸಾಕು ಪ್ರಾಣಿಗಳ ಪ್ರವೇಶವನ್ನು ನಿಷೇಧಿಸುವಂತೆ ಸೂಚನೆ ನೀಡಿದ್ದು, ಈ ಮೂಲಕ ಶ್ವಾನ ಪ್ರಿಯರಿಗೆ ಬಿಗ್ ಶಾಕ್ ನೀಡಿದೆ.