ಡ್ರಗ್ಸ್ ಮಾಫಿಯಾ ವಿರುದ್ಧ ಉನ್ನತ ಮಟ್ಟದ ತನಿಖೆಯಾಗಲಿ: ಮೈಸೂರಿನಲ್ಲಿ ಎಬಿವಿಪಿಯಿಂದ ಪ್ರತಿಭಟನೆ….

Promotion

ಮೈಸೂರು,ಸೆಪ್ಟಂಬರ್,3,2020(www.justkannada.in):  ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಆರೋಪ ಕೇಳಿ ಬಂದಿದ್ದು,  ಈ ನಡುವೆ ಡ್ರಗ್ಸ್ ಮಾಫಿಯಾ ವಿರುದ್ಧ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಆಗ್ರಹಿಸಿ ಮೈಸೂರಿನಲ್ಲಿ ಎಬಿಬಿಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.jk-logo-justkannada-logo

ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿ ಎಬಿವಿಪಿ ವತಿಯಿಂದ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಡ್ರಗ್ಸ್ ದಂಧೆಕೊರರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು. ಈ ಜಾಲದಲ್ಲಿ ಸ್ಯಾಂಡಲ್ ವುಡ್ ಗೆ ನಂಟಿರುವ ಆರೋಪ ಕೇಳಿ ಬಂದಿದೆ. ಹಾಗೂ ಡ್ರಗ್ಸ್ ದಂಧೆಯಲ್ಲಿ ಪ್ರಭಾವಿ ರಾಜಕಾರಣಿಗಳು ಇದ್ದಾರೆ. ಈ ಡ್ರಗ್ಸ್ ಮಾಫಿಯಾ ವಿರುದ್ಧ ಸರ್ಕಾರ ಉನ್ನತ ಮಟ್ಟದ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.

ಹಾಗೆಯೇ ಸಮಾಜಕ್ಕೆ ಹಾನಿಕಾರಕ ಈ ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತುಹಾಕಬೇಕು. ಯಾರೇ ತಪ್ಪಿತಸ್ಥರಿದ್ದರೂ ಅ ಅವರಿಗೆ ತಕ್ಕ ಶಿಕ್ಷೆ ನೀಡಬೇಕು. ಕೂಡಲೇ ಗೃಹ ಇಲಾಖೆ  ಡ್ರಗ್ಸ್ ಜಾಲದ ವಿರುದ್ದ ತನ್ನ ತನಿಖೆ ಚುರುಕುಗೊಳಿಸಬೇಕೆಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಒತ್ತಾಯಿಸಿದರು.

Key words: high-level –investigation- against -Drugs Mafia-Protest – ABVP – Mysore