ಹುಲಿ ಸಂರಕ್ಷಣಾ ಉದ್ಯಾನವನಗಳಿಗೆ ಹೈಟೆಕ್ ಸ್ಪರ್ಶ- ಸಚಿವ ಆನಂದ್ ಸಿಂಗ್  

ಬೆಂಗಳೂರು,ಡಿ.30,2020(www.justkannada.in):  ರಾಜ್ಯದ ಹುಲಿ ಸಂರಕ್ಷಣಾ ಉದ್ಯಾನವನಗಳಿಗೆ ಹೈಟೆಕ್ ಸ್ಪರ್ಶ ನೀಡಲಾಗುವುದು ಎಂದು ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ.high-tech-touches-tiger-conservation-parks-minister-anand-singh

ವಿಕಾಸಸೌಧದಲ್ಲಿ  11ನೇ ಹುಲಿ ಸಂರಕ್ಷಣಾ ಪ್ರತಿಷ್ಠಾನ ಆಡಳಿತ ಮಂಡಳಿಯ ಸಭೆ ನಡೆಸಿದ ಸಚಿವ ಆನಂದ್ ಸಿಂಗ್, ಹುಲಿಗಳ ಸಂರಕ್ಷಣೆ ಜತೆಗೆ ಅವುಗಳ ಸಂರಕ್ಷಣಾ ಉದ್ಯಾನವನಗಳನ್ನು ತಂತ್ರಜ್ಞಾನಗಳ ಬಳಕೆ ಮೂಲಕ ಅಭಿವೃದ್ಧಿ ಮಾಡಲಾಗುವುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ 100 ಚದರ ಅಡಿ ವ್ಯಾಪ್ತಿಯಲ್ಲಿ 12 ಹುಲಿಗಳಿವೆ. ಹುಲಿಗಳ ಸಂಖ್ಯೆಯಲ್ಲಿ ಇಡೀ ದೇಶದಲ್ಲಿ ನಮ್ಮ ರಾಜ್ಯ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಹೀಗಾಗಿ ಹುಲಿಗಳ ಸಂರಕ್ಷಣೆ ಮಾಡುವ ಮೂಲಕ ಅವುಗಳ ಸಂತತಿಯನ್ನು ಉಳಿಸಬೇಕು. ವಿಶೇಷವಾಗಿ ನಾಗರಹೊಳೆ ಹುಲಿ ಸಂರಕ್ಷಣಾ ಪ್ರತಿಷ್ಠಾನ ವತಿಯಿಂದ ಹುಲಿಗಳಿಂದ ಹಸುಗಳನ್ನು ರಕ್ಷಿಸಲು ಸುರಕ್ಷಿತವಾದ ಶೆಡ್ ನಿರ್ಮಾಣ ಮಾಡಲಾಗಿದೆ. ಇದನ್ನು ಯಾರೂ ದುರುಪಯೋಗ ಪಡಿಸಿಕೊಳ್ಳದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಚಿವ ಆನಂದ್ ಸಿಂಗ್ ತಿಳಿಸಿದರು.

ಮೃಗಾಲಯಗಳಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು:

ಮೃಗಾಲಯಲಕ್ಕೆ ಭೇಟಿ ನೀಡುವ ಪ್ರವಾಸಿಗರ ಅನುಕೂಲಕ್ಕಾಗಿ ಮೂಲಸೌಕರ್ಯಗಳನ್ನು ಅಭಿವೃದ್ಧಿ ಮಾಡಲಾಗುವುದು. ಹುಲಿ ಸಂರಕ್ಷಣಾ ಪ್ರತಿಷ್ಠಾನ ನಿಧಿಯಿಂದ ಬಳಕೆ ಮಾಡಿ ಉಳಿದ ಅನುದಾನವನ್ನು ಮೂಲಸೌಕರ್ಯಗಳ ಅಭಿವೃದ್ಧಿ ಕಾರ್ಯಗಳಿಗೆ ಬಳಸಲಾಗುವುದು ಎಂದು ತಿಳಿಸಿದರು.

ಹುಲಿ ಸಂರಕ್ಷಣಾ ಉದ್ಯಾನವನಗಳಲ್ಲಿ ಸ್ವಚ್ಛತೆ ಕಾಪಾಡುವುದು ಕೂಡ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಪ್ರತಿಷ್ಠಾನದ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀ ಸಂದೀಪ್ ದವೆ, ಅರಣ್ಯ ಪಡೆಗಳ ಮುಖ್ಯಸ್ಥರಾದ ಶ್ರೀ ಸಂಜಯ್ ಮೋಹನ್ ಹಾಗೂ ಅಧಿಕಾರಿಗಳು ಹಾಜರಿದ್ದರು.

English summary…..

High-tech touch to tiger reserve parks – Minister Anand Singh
Bengaluru, Dec. 30, 2020 (www.justkannada.in): Forest Minister Anand Singh today informed that the tiger reserve parks in the State would be given a high-tech touch.high-tech-touches-tiger-conservation-parks-minister-anand-singh
The 11th Tiger Conservation Foundation Board meeting was held at the Vidhana Soudha, in Bengaluru today. Addressing the meeting he said, the tiger reserve parks would be developed by giving a technological touch. “There are 12 tigers in 100 sq. ft area in the Nagarahole tiger reserve park. Karnataka is in third place in the country in terms of number of tigers. Hence, there is a need to conserve and strive to increase the number. A shed has been built in Nagarahole, by the Nagarahole Tiger Conservation Foundation especially to protect cows from tigers,” he said and instructed the officials concerned to take measures to ensure that nobody misuses the shed.
Keywords: Tiger Reserve parks/ Tiger Conservation Foundation/ Forest Minister Anand Singh

Key words: High-tech -touches -tiger conservation parks-. Minister- Anand Singh