ವಿಚಾರಣೆಗೆ ಹಾಜರಾಗಿ:  ಮೈಸೂರು ಪಾಲಿಕೆ ಕಮಿಷನರ್ ಗೆ ಹೈಕೋರ್ಟ್ ಆದೇಶ.

kannada t-shirts

ಬೆಂಗಳೂರು,ಫೆಬ್ರವರಿ,4,2022(www.justkannada.in): ‘ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡಗಳಲ್ಲಿ ವಾಣಿಜ್ಯ ಚಟುವಟಿಕೆಗೆ ಅವಕಾಶ ನೀಡಲಾಗಿದೆ ಎಂದು ಆರೋಪಿಸಿ ಸಲ್ಲಿಸಿರುವ  ಅರ್ಜಿಗೆ ಸಂಬಂಧಿಸಿದಂತೆ ಫೆಬ್ರವರಿ 15ರಂದು ವಿಚಾರಣೆಗೆ ಹಾಜರಾಗಲು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತರೆಡ್ಡಿ ಅವರಿಗೆ ಹೈಕೋರ್ಟ್‌ ಆದೇಶಿಸಿದೆ.

ಮೈಸೂರಿನ ಸಮೀವುಲ್ಲಾ ಷರೀಫ್ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

ವಿಚಾರಣೆ ವೇಳೆ ಪಾಲಿಕೆ ಆಯುಕ್ತರ ಪರ ವಕೀಲ ಮೋಹನ್‌ಭಟ್, ‘ಲಕ್ಷ್ಮೀಕಾಂತರೆಡ್ಡಿ ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ. ಕ್ವಾರ೦ಟೈನ್ ನಲ್ಲಿರುವ ಕಾರಣ, ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿಲ್ಲ’ ಎಂದು ತಿಳಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ‘ಆನ್ ಲೈನ್ ಮೂಲಕ ಮುಂದಿನ ವಿಚಾರಣೆಗೆ ಹಾಜರಾಗಬೇಕು’ ಎಂದು ಆದೇಶಿಸಿದೆ.

Key words: highcourt-mysore- corporation-Commissioner

website developers in mysore