2019-20ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟಿಸಿದ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡ…

Promotion

ಬೆಂಗಳೂರು,ಮೇ,25,2019(www.justkannada.in):  ಇಂಜಿನಿಯರಿಂಗ್ ಮತ್ತು ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆದಿದ್ದ 2019-20ನೇ ಸಾಲಿನ ಸಿಇಟಿ ಫಲಿತಾಂಶವನ್ನ ಪ್ರಕಟಿಸಲಾಗಿದೆ.

ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರು ಸುದ್ದಿಗೋಷ್ಠಿ ನಡೆಸಿ  ಸಿಇಟಿ ಫಲಿತಾಂಶ ಬಿಡುಗಡೆ ಮಾಡಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಕೆಇಎ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದಾಗಿದೆ. ಎಂಜಿನಿಯರಿಂಗ್ ಕಾಲೇಜು ಪ್ರವೇಶಕ್ಕೆ ಮುಂದಾಗಿರುವ ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆಯನ್ನು ಏ 29 ಹಾಗೂ 30ರಂದು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ಪರೀಕ್ಷೆ ಬರೆದಿದ್ದರು.

Key words: Higher education minister GT Deve Gowda announces CET results

#GTDeve Gowda #announces #CET #results