ಇಂದು ಹೈಕೋರ್ಟ್’ನಲ್ಲಿ ಹಿಜಾಬ್ ಪ್ರಕರಣದ ವಿಚಾರಣೆ

ಬೆಂಗಳೂರು, ಫೆಬ್ರವರಿ 08, 2022 (www.justkannada.in): ಹೈಕೋರ್ಟ್ ನಲ್ಲಿರುವ ಹಿಜಾಬ್ ಪ್ರಕರಣದ ವಿಚಾರಣೆ ಇಂದು ನಡೆಯಲಿದೆ.

ರಾಜ್ಯದಲ್ಲಿಯ ಹಿಜಾಬ್ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ರಾಜ್ಯದ ಬಹುತೇಕ ಕಾಲೇಜುಗಳಿಗೆ ಹಿಜಾಬ್ ವಿವಾದ ವ್ಯಾಪಿಸಿದೆ.

ರಾಜಕೀಯ ತಿರುವು ಪಡೆದುಕೊಂಡಿದ್ದು, ಇಂದು ಈ ಮಹತ್ವದ ವಿಚಾರಣೆಯನ್ನು ಹೈಕೋರ್ಟ್ ಕೈಗೆತ್ತಿಕೊಳ್ಳಲಿದೆ.

ಹಿಜಾಬ್ ಧರಿಸಲು ನಿರ್ಬಂಧ ವಿಧಿಸಿರುವುದನ್ನ ಪ್ರಶ್ನಿಸಿ ಉಡುಪಿ ಮೂಲದ ವಿದ್ಯಾರ್ಥಿನಿಯರು ಮತ್ತು ಪೋಷಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣ ವಿಚಾರಣೆ ಇಂದು ನಡೆಯಲಿರುವ ಹಿನ್ನೆಲೆಯಲ್ಲಿ ಸಿಎಂ ಶಾಂತಿ ಕಾಪಾಡುವಂತೆ ಸಿಎಂ ಮನವಿ ಮಾಡಿದ್ದಾರೆ.