ಕೇಸರಿ ಶಾಲು, ಹಿಜಾಬ್ ಗೆ ಅವಕಾಶ ಇಲ್ಲ : ಪಾಠ ಬೇಕಾದ್ರೆ ಸಮವಸ್ತ್ರ ಧರಿಸಿಯೇ ಬರಬೇಕು- ಶಿಕ್ಷಣ ಸಚಿವ ಬಿ.ಸಿ ನಾಗೇಶ್.

ಮೈಸೂರು,ಫೆಬ್ರವರಿ,7,2022(www.justkannada.in): ನಿಮಗೆ ಪಾಠ ಬೇಕಾದರೆ ಸಮವಸ್ತ್ರ ಧರಿಸಿಯೇ ಶಾಲೆಗೆ ಬರಬೇಕು. ಕೇಸರಿ ಶಾಲು, ಹಸಿರು ಶಾಲು ಯಾವುದನ್ನೂ ಧರಿಸಿ ಬಂದರೂ ಅವರಿಗೆ ತರಗತಿಗೆ ಅವಕಾಶ ಇಲ್ಲ ಎಂದು ಹಿಜಾಬ್ ವಿವಾದ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.

ಮೈಸೂರಿನಲ್ಲಿ ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಶಿಕ್ಷಣ ಸಚಿವ ಬಿಸಿ ನಾಗೇಶ್,  ನಿಮ್ಮ ಮಸೀದಿ ಒಳಗೆ ನಿಮಗೆ ಪ್ರವೇಶವಿಲ್ಲ. ಇದರ ವಿರುದ್ದ ಹೋರಾಟ ಮಾಡಿ. ನಿಮ್ಮ ಹಕ್ಕುಗಳಿಗಾಗಿ ಅಲ್ಲಿ ಧ್ವನಿ ಎತ್ತಿ. ಶಿಕ್ಷಣ ವ್ಯವಸ್ಥೆ ಒಳಗಡೆ ಈ ಹೋರಾಟ ಮಾಡಬೇಡಿ ನಿಮಗೆ ಪಾಠ ಬೇಕಾದರೆ ಸಮವಸ್ತ್ರ ಧರಿಸಿಯೇ ಶಾಲೆಗೆ ಬರಬೇಕು. ಶಾಲಾ ಆವರಣದ ಗೇಟ್ ವರೆಗೂ ಹಿಜಾಬ್ ಧರಿಸಿ ಬನ್ನಿ, ನಮ್ಮ ತಕಾರಾರಿಲ್ಲ.  ಅದರೆ ಶಿಕ್ಷಣ ವ್ಯವಸ್ಥೆ ಒಳಗಡೆ ಈ ಹೋರಾಟ ಮಾಡಬೇಡಿ. ಕೋಲಾರದಲ್ಲಿ ನಮಾಜ್ ಕೂಡ ಮಾಡಿದ್ದಾರೆ. ಇಂತದ್ದಕ್ಕೆಲ್ಲಾ ಅವಕಾಶ ಇಲ್ಲ ಎಂದು ತಿಳಿಸಿದ್ದಾರೆ.

ಕುಂದಾಪುರದಲ್ಲಿ ಇಂದು ಹಿಜಾಬ್ ಧರಿಸಿ ಬಂದವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ. ಆ ಕೊಠಡಿಯಲ್ಲಿ ಯಾವ ಕ್ಲಾಸ್‌ಗಳು ನಡೆಯುತ್ತಿಲ್ಲ. ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ರಸ್ತೆಯಲ್ಲಿ ನಿಲ್ಲುವುದು ಬೇಡವೆಂದು ಕೊಠಡಿಯಲ್ಲಿ ಕೂರಿಸಿದ್ದೇವೆ. ವಿದ್ಯಾರ್ಥಿನಿಯರನ್ನ ರಸ್ತೆಯಲ್ಲಿ ನಿಲ್ಲಿಸಲು ಇದು ಪಾಕಿಸ್ತಾನ ಅಲ್ಲ. ಅವರು ನಮ್ಮ ಮಕ್ಕಳು. ಅವರು ತುಂಬಾ ಮುಗ್ಧತೆ ಇರುವ ಹೆಣ್ಣುಮಕ್ಕಳು.

ಹೆಣ್ಣುಮಕ್ಕಳ ಮುಗ್ದತೆಯನ್ನ ಕೆಲ ರಾಜಕಾರಣಿಗಳು ದುರುಪಯೋಗ ಪಡಿಸಿಕಪಳ್ಳುತ್ತಿದ್ದಾರೆ. ಮುಗ್ಧ ವಿದ್ಯಾರ್ಥಿನಿಯರಿಗೆ ಶಾಲೆಯ ಒಳಗೆ ಕೊಠಡಿಯಲ್ಲಿ ಕೂರಿಸಿ ಬುದ್ಧಿ ಹೇಳುತ್ತೇವೆ. ಇದು ಧರ್ಮದ ಶಿಕ್ಷಣವಲ್ಲ. ಇದನ್ನ ಹಿಜಾಬ್ ಧರಿಸುವ ವಿದ್ಯಾರ್ಥಿನಿಯರು ಅರ್ಥ ಮಾಡಿಕೊಳ್ಳಬೇಕು. ನಾಳೆಯ ನ್ಯಾಯಾಲಯದ ಆದೇಶವನ್ನು ನಾವು ನಿರೀಕ್ಷಿಸುತ್ತಿದ್ದೇವೆ. ಅದರ ಆಧಾರದ ಮೇಲೆ ಶಿಕ್ಷಣ ಇಲಾಖೆ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಬಿಸಿ ನಾಗೇಶ್ ತಿಳಿಸಿದರು.

Key words: hijab- Education Minister -BC Nagesh.

ENGLISH SUMMARY….

No permission for saffron shawl, hijab: If you want classes follow uniform rule – Education Minister B.C. Nagesh
Mysuru, February 7, 2022 (www.justkannada.in): “If you want to attend classes you have to come to the schools in uniform. We won’t allow anyone who comes wearing a saffron shawl, green shawl, or whatever,” said Primary and Secondary Education Minister B.C. Nagesh.
Speaking in Mysuru today, he said, “You are not allowed inside the mosque. Fight for your rights there. Please don’t bring such fights in education. If you want to attend classes you have to come in uniform. You can come in a hijab till the school gate we don’t mind. But please don’t create such controversies in the educational sector. I have heard students doing Namaz in Kolar. There is no permission for all this,” he said.
“At Kundapura students who are coming
wearing a hijab are made to sit in a separate room. But no classes are held. They are doing this to prevent the students from standing outside. This is not Pakistan to make them stand outside. They are also our children, they are innocent, we know,” he added.
He also alleged that a few politicians are trying to misuse the innocence of girls. We can’t make them sit inside the classroom and teach them not to do this. This is not a religious educational system. Girl students who are coming to the schools wearing a hijab should understand this. We are waiting for the court orders tomorrow. The Education Department will take further measures after that, he said.
Keywords: Hijab/ Education Department/ Education Minister