ಹಿಜಾಬ್ ಕೇಸರಿ ಶಾಲು ವಿವಾದ: ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್.

Promotion

ಬೆಂಗಳೂರು,ಫೆಬ್ರವರಿ,8,2022(www.justkannada.in):  ರಾಜ್ಯದಲ್ಲಿ ಸದ್ಧು ಮಾಡುತ್ತಿರುವ ಹಿಜಾಬ್ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಕೋರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ನಾಳೆಗೆ ಮುಂದೂಡಿದೆ.

ವಿವಾದ ಸಂಬಂಧ ಹಿಜಾಬ್ ಧರಿಸಲು ಅವಕಾಶ ಕೋರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ಕೈಗೆತ್ತುಕೊಂಡ ಹೈಕೋರ್ಟ್ ಮಧ್ಯಾಹ್ನಕ್ಕೆ ವಿಚಾರಣೆ ಮುಂದೂಡಿತ್ತು. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ದೇವದತ್ ಕಾಮತ್, ಹಿಜಾಬ್ ಇಸ್ಲಾಂನ ಅತ್ಯಗತ್ಯ ಆಚರಣೆ. ಪವಿತ್ರ ಕುರಾನ್ ನಲ್ಲಿ ಹೀಗೆಂದು ಉಲ್ಲೇಖವಾಗಿದೆ. ಸಂವಿಧಾನದ 19(1) A ಅಡಿ ಇಚ್ಚೆಯ ಬಟ್ಟೆ ಧರಿಸುವುದು ಹಕ್ಕು. ಧರ್ಮ ಪಾಲನೆ ಜನರ ಮೂಲಭೂತ ಹಕ್ಕು. ಹಿಜಾಬ್ ಕೂದಲು ಕುತ್ತಿಗೆ ಮುಚ್ಚಬೇಕು. ಕೈ, ಮುಖ ಬಿಟ್ಟು ಉಳಿದುದನ್ನು ಅಪರಿಚಿತರಿಗೆ ತೋರಿಸಬಾರದು ಎಂದು ಖುರಾನ್ ನಲ್ಲಿ ಉಲ್ಲೇಖವಾಗಿದೆ ಎಂದು ವಾದ ಮಂಡಿಸಿದರು.

ಈ ಮಧ್ಯೆ ವಿಚಾರಣೆಯನ್ನ ನಾಳೆ ಮಧ್ಯಾಹ್ನ 2.30ಕ್ಕೆ ಹೈಕೋರ್ಟ್ ಮುಂದೂಡಿದ್ದು, ನಾಳೆ ಸರ್ಕಾರ, ಮಧ್ಯಂತರ ಅರ್ಜಿದಾರರು  ವಾದ ಮಂಡಿಸಲಿದ್ದಾರೆ.

Key words: hijab-high court-hearing