ತಾರಕಕ್ಕೇರಿದ ಹಿಜಾಬ್ ಕೇಸರಿ ಶಾಲು ವಿವಾದ: ಕಾಲೇಜಿನಲ್ಲಿ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ

ಶಿವಮೊಗ್ಗ,ಫೆಬ್ರವರಿ,8,2022(www.justkannada.in):  ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು ಈ ನಡುವೆ ಶಿವಮೊಗ್ಗ ಮತ್ತು ಬಾಗಲಕೋಟೆಯಲ್ಲಿ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆದಿದೆ.

ಬಾಗಲಕೋಟೆಯ ರಬಕವಿ ಬನಹಟ್ಟಿ ಪಟ್ಟಣದ ಸರ್ಕಾರಿ ಪಿಯು ಕಾಲೇಜಿನಲ್ಲಿ ಕಲ್ಲು ತೂರಾಟ ನಡೆಸಲಾಗಿದ್ದು, ವಿದ್ಯಾರ್ಥಿ ಗಾಯಗೊಂಡಿರುವ ಘಟನೆ ನಡೆದಿದೆ. ಪಿಯು ಕಾಲೇಜಿನ ಒಳಗೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು ಧರಣಿ ನಡೆಸುತ್ತಿದ್ದರೆ. ಹೊರಗೆ ಕೆಲ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಧರಣಿ ನಡೆಸುತಿದ್ದು ಪರಿಸ್ಥಿತಿ ಉದ್ವಿಗ್ನವಾಗಿದೆ. ಕಾಲೇಜಿಗೆ ಪೊಲೀಸ್ ಭದ್ರತೆ ನೀಡಲಾಗಿದೆ. ಇನ್ನು ವಿದ್ಯಾರ್ಥಿಗಳ ಗುಂಪು ಚದುರಿಸಲು ಲಘು ಲಾಠಿಚಾರ್ಜ್ ಮಾಡಲಾಗಿದೆ.

ಇನ್ನು ಶಿವಮೊಗ್ಗದಲ್ಲೂ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆಸಲಾಗಿದೆ. ಶಿವಮೊಗ್ಗದಲ್ಲಿ ಕಾಲೇಜು ಧ್ವಜ ಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಲಾಗಿದೆ. ಸದ್ಯ ಕಾಲೇಜಿನಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

Key words: Hijab –saffron-controversy-college-students

ENGLISH SUMMARY….

Hijab, Saffron Shawl controversy turns violent
Bengaluru, February 8, 2022 (www.justkannada.in): The controversy over the Hijab and the wearing of saffron shawl by students in schools has taken an ugly turn at Shivamogga and Bagalkot.
Stone pelting incidents have been reported at the Government PU College in Banahatti Town of Rabakavi in Bagalkot district. One student is reportedly injured in the incident. While students belonging to a particular community were protesting wearing hijab inside the PU College, a few students were reportedly protesting wearing saffron shawls. Tension prevailed for some time at the college and police security has been provided.
A similar incident has been reported at the Government PU College in Shivamogga. A few students are said to have hoisted a saffron flag in the college creating tense moments.
Keywords: Hijab/ Saffron shawl/ controversy/ turns violent