ಪಿಎಸ್ ಐ ಹಗರಣಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಕಾರಣ: ಸಂಪುಟದಿಂದ ವಜಾಗೊಳಿಸಿ- ಸಿದ‍್ಧರಾಮಯ್ಯ ಆಗ್ರಹ.

Promotion

ಬೆಂಗಳೂರು,ಜುಲೈ,4,2022(www.justkannada.in): ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ADGP ಅಮೃತಪೌಲ್ ಬಂಧನವಾಗಿದ್ದು ಈ ಬೆನ್ನಲ್ಲೆ ಟ್ವಿಟ್ ಮಾಡಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ,  ಗೃಹ ಸಚಿ ಅರಗ ಜ್ಞಾನೇಂದ್ರ ಅವರನ್ನ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ಧರಾಮಯ್ಯ, ಕಪಾಟಿನೊಳಗಿಂದ ಒಂದೊಂದೇ ಅಸ್ತಿಪಂಜರಗಳು ಹೊರಗೆ ಬೀಳುತ್ತಿವೆ. PSI ನೇಮಕಾತಿ ಹಗರಣದಲ್ಲಿ ADGP ಅಮೃತಪೌಲ್ ಬಂಧನವೇ ಇದಕ್ಕೆ ಸಾಕ್ಷಿ. ಹಗರಣವೇ ನಡೆದಿಲ್ಲ ಎಂದು ಮೈಮೇಲೆ ಬರುತ್ತಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ಈಗ ಏನು ಹೇಳುತ್ತಾರೆ?

PSI ನೇಮಕಾತಿ ಹಗರಣದಲ್ಲಿ ಅಧಿಕಾರಿಗಳನ್ನು ಮಾತ್ರ ಹೊಣೆಮಾಡಿ ಜಾರಿಕೊಳ್ಳುವುದು ಬೇಡ. ಈ ಹಗರಣಕ್ಕೆ ಅಧಿಕಾರಿಗಳಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಕಾರಣ. ಸಿಎಂ ಬೊಮ್ಮಾಯಿ ಅವರು ಮೊದಲು ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಒತ್ತಾಯಿಸಿದ್ದಾರೆ.

Key words: Home Minister- Araga Gnanendra –also- responsible – PSI scam- Siddaramaiah