ಕರ್ನಾಟಕಕ್ಕೆ ನಾವು ನುಗ್ಗುತ್ತೇವೆ ಎಂದಿದ್ದ ಶಿವಸೇನಾ ನಾಯಕ ಸಂಜಯ್ ರಾವತ್ ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ತಿರುಗೇಟು.

Promotion

ಬೆಳಗಾವಿ,ಡಿಸೆಂಬರ್,21,2022(www.justkannada.in): ಭಾರತಕ್ಕೆ ಚೀನಾ ನುಗ್ಗಿದಂತೆ ಕರ್ನಾಟಕಕ್ಕೆ ನಾವು ನುಗ್ಗುತ್ತೇವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ಧ ಶಿವಸೇನಾ ನಾಯಕ ಹಾಗೂ ಸಂಸದ ಸಂಜಯ್ ರಾವತ್ ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ,  ಸಂಜಯ್ ರಾವತ್ ಹೇಳಿಕೆ ಖಂಡಿಸುತ್ತೇನೆ.  ಎರಡು ರಾಜ್ಯಗಳ  ಜನರ ನಡುವೆ ಬೆಂಕಿ ಇಡುವ ಹೇಳಿಕೆ ಇದು.   ರಾಜಕೀಯ ಮುಖಂಡರು ಸಂಯಮ ತೋರಬೇಕು.  ಕಾನೂನು ಸುವ್ಯವಸ್ಥೆಗೆ  ಭಂಗ ಆಗದಂತೆ ನೋಡಿಕೊಳ್ಳಬೇಕು. ಆದರೆ ಈ ರೀತಿ ಹೇಳಿಕೆ ನೀಡಿರುವುದು ಖಂಡನೀಯ ಎಂದಿದ್ದಾರೆ. 

ಮಹಾರಾಷ್ಟ್ರ-ಕರ್ನಾಟಕ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ, ನಮಗೆ ಯಾರ ಅನುಮತಿ ಬೇಕಾಗಿಲ್ಲ , ಭಾರತಕ್ಕೆ ಚೀನಾ ನುಗ್ಗಿದಂತೆ ಬೆಳಗಾವಿಗೆ ನಾವು ನುಗ್ಗುತ್ತೇವೆ ಎಂದು ಶಿವಸೇನಾ ನಾಯಕ ಸಂಜಯ್ ರಾವತ್ ಉದ್ಧಟತನದ ಹೇಳಿಕೆ ನೀಡಿದ್ದು ಈ ವಿವಾದಾತ್ಮಕ ಹೇಳಿಕೆ ವಿರುದ್ಧ ಸಾಕಷ್ಟು ವಿರೋಧಗಳು ವ್ಯಕ್ತವಾಗಿದೆ.

Key words: Home Minister- Araga  jnanendra -Shiv Sena –leader- Sanjay Rawat