ಕಾಲೇಜು ವಿದ್ಯಾರ್ಥಿಗಳನ್ನು ದುರುಪಯೋಗಪಡಿಸಿಕೊಂಡು ದೇಶ ವಿರೋಧಿ ಚಟುವಟಿಕೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು, ಫೆಬ್ರವರಿ 22, 2020 (www.justkannada.in): ದೇಶ ವಿರೋಧಿ ಚಟುವಟಿಕೆ ನಡೆಸಲು ಅಂತರರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆಯುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲೇಜು ವಿದ್ಯಾರ್ಥಿಗಳನ್ನು ದುರುಪಯೋಗಪಡಿಸಿಕೊಂಡು ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸುವ ಪ್ರಯತ್ನ ನಡೆದಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಕಠಿಣ‌ ಕ್ರಮ ಕೈಗೊಳ್ಳಲಾಗುವುದು. ಶಿಕ್ಷಣ ಸಂಸ್ಥೆಗಳಿಗೆ ಈಗಾಗಲೇ ಸೂಚನೆ ನೀಡಿದ್ದು, ಇಂತಹ ದೇಶ ವಿರೋಧಿ ಚಟುವಟಿಕೆ ಕಂಡು ಬಂದರೆ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಸೂಚಿಸಲಾಗಿದೆ ಎಂದರು.