ಕುತೂಹಲ ಮೂಡಿಸಿದ ಗೃಹಸಚಿವ ಬಸವರಾಜ ಬೊಮ್ಮಾಯಿ- ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ.

Promotion

 ಬೆಂಗಳೂರು,ಜೂನ್,15,2021(www.justkannada.in): ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿಯಾಗಿ ಚರ್ಚೆ ನಡೆಸಿದರು.jk

ಬೆಂಗಳೂರಿನ ಸಚಿವ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ ಹೆಚ್.ಡಿ ರೇವಣ್ಣ ಸುಮಾರು ಅರ್ಧಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಬಳಿಕ ಈ ಬಗ್ಗೆ ಮಾತನಾಡಿದ ಹೆಚ್.ಡಿ ರೇವಣ್ಣ, ಯಾವುದೇ ರಾಜಕೀಯ ವಿಚಾರ ಚರ್ಚಿಸಿಲ್ಲ. ಬೊಮ್ಮಾಯಿ ನನ್ನ ಹಳೆಯ ಸ್ನೇಹಿತರು, ನಮ್ಮ ಪಕ್ಷದಲ್ಲೇ ಇದ್ದವರು. ಹೀಗಾಗಿ ಭೇಟಿ ಮಾಡಿದ್ದೇನೆ ಎಂದರು.

ಹೊಳೇನರಸಿಪುರದಲ್ಲಿ ಠಾಣೆ ಸ್ಥಾಪನೆ ಬಗ್ಗೆ ಚರ್ಚಿಸಿದ್ದೇನೆ. ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ ಎಂದು ಹೆಚ್.ಡಿ ರೇವಣ್ಣ ತಿಳಿಸಿದರು.

Key words: Home Minister- Basavaraja Bommai-  Former Minister -HD Revanna-meet