ಭೀಕರ ಅಪಘಾತ: ಒಂದೇ ಕುಟುಂಬದ ಐವರು ದುರ್ಮರಣ.

Promotion

ತೆಲಂಗಾಣ, ಸೆಪ್ಟೆಂಬರ್, 15,2023(www.justkannada.in): ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ಸೂರ್ಯಪೇಠ ಜಿಲ್ಲೆಯ ಮಠಮಪಲ್ಲಿಯಲ್ಲಿ ನಡೆದಿದೆ.

ಬೆಳಗಾವಿ  ಜಿಲ್ಲೆ ಅಥಣಿ ತಾಲೂಕಿನ ಬಡಚಿ ಗ್ರಾಮದ ಒಂದೇ ಕುಟುಂಬದ ಐವರು ಘಟನೆಯಲ್ಲಿ ಮೃತಪಟ್ಟಿದ್ದಾರೆ. ಕಡಪ-ಚಿತ್ತೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ.  ಶೋಭಾ ಆಜೂರ (36), ಅಂಬಿಕಾ ಆಜೂರ (14), ಮಾನಂದಾ ಆಜೂರ (32), ಹನುಮಂತ ಆಜೂರ (42) ಚಾಲಕ ಹನುಮಂತ ಜಾಧವ (32) ಮೃತಪಟ್ಟವರು. ಇನ್ನು 11 ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕ್ರೂಸರ್ ವಾಹನ ಮಾಡಿಕೊಂಡು ಮೊದಲು ಶ್ರೀಶೈಲ ದರ್ಶನ ಪಡೆದು ಬಳಿಕ ತಿರುಪತಿಗೆ ತೆರಳಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿ ಇಂದು ಮನೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಈ ಘಟನೆ ನಡೆದಿದೆ.

Key words: Horrible –accident- Five -members – same family -died.